NHAI Recruitment 2024 : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 04, 2024 | 10:45 AM

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್​​ಹೆಚ್​​ಎಐ) ದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸುವರ್ಣವಕಾಶವೊಂದು ಒದಗಿ ಬಂದಿದೆ. ಈ ಪ್ರಾಧಿಕಾರವು ಒಟ್ಟು ನಾಲ್ಕು ಮ್ಯಾನೇಜರ್ (ಲೀಗಲ್ ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ವಿವರ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಹತಾ ಮಾನದಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

NHAI Recruitment 2024 : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us on

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (ಲೀಗಲ್) ಹುದ್ದೆಗಳು ಖಾಲಿಯಿದ್ದು, ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮಾಡಬಯಸುವವರು ನವೆಂಬರ್ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಈ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು.

ಹುದ್ದೆಗಳ ಸಂಪೂರ್ಣ ವಿವರ

* ನೇಮಕಾತಿ ಸಂಸ್ಥೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಹೆಚ್ ಎಐ )

* ಹುದ್ದೆ ಹೆಸರು: ಮ್ಯಾನೇಜರ್ (ಲೀಗಲ್) ಹುದ್ದೆ

* ಖಾಲಿಯಿರುವ ಹುದ್ದೆಗಳ ಸಂಖ್ಯೆ : ನಾಲ್ಕು

* ಉದ್ಯೋಗ ಸ್ಥಳ : ಭಾರತದಲ್ಲಿ ಎಲ್ಲಿಯಾದರೂ

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಇರಬೇಕಾದ ವಯಸ್ಸಿನ ಮಿತಿ ಹಾಗೂ ಶೈಕ್ಷಣಿಕ ಅರ್ಹತೆಗಳು

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಲಿಯಲ್ಲಿ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ, ಎಲ್‌ಎಲ್‌ಪಿ ಪದವಿ ಪಡೆದಿರಬೇಕು.

* ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯಿದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

*ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯಿರುತ್ತದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವಿರುತ್ತದೆ.

* ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 15,600 ರಿಂದ 39,100 ರೂಪಾಯಿವರೆಗೆ ತಿಂಗಳ ವೇತನವಿರುತ್ತದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ?

* ಆಸಕ್ತ ಅಭ್ಯರ್ಥಿಗಳು ನವೆಂಬರ್ 29 ರೊಳಗೆ ಆನ್‌ಲೈನ್ ಇಲ್ಲವೇ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

* ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಈ ವೆಬ್ ಸೈಟ್ ಲಿಂಕ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

* ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು DGM (HR & Admn-III) -NG, ಅದೇ ಹೈವೇಸ್ ಅಥಾರಿಟಿ ಆಫ್ ಇಂಡಿಯಾ, ಪ್ಲಾಟ್ ನಂ.ಜಿ-5&6 ಸೆಕ್ಟರ್-10, ದ್ವಾರಕಾ, ನವೆಂಬರ್-110075” ಇಲ್ಲಿಗೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ