NHB Recruitment 2022: NH ಬ್ಯಾಂಕ್ನ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
NHB Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NHB ನ ಅಧಿಕೃತ ವೆಬ್‌ಸೈಟ್ nhb.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
NHB Recruitment 2022: ನ್ಯಾಷನಲ್ ಹೌಸಿಂಗ್ ಬ್ಯಾಂಕ್ನ (NHB) ಮುಖ್ಯ ಕಾಂಪ್ಲಿಯೆನ್ಸ್ ಅಧಿಕಾರಿ, ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ, ಮುಖ್ಯ ಹಣಕಾಸು ಅಧಿಕಾರಿ, ಮುಖ್ಯ ತಂತ್ರಜ್ಞಾನ ಅಧಿಕಾರಿ ಮತ್ತು ಮೇಲ್ವಿಚಾರಣಾ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NHB ನ ಅಧಿಕೃತ ವೆಬ್‌ಸೈಟ್ nhb.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
NHB Recruitment 2022: ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 14
NHB Recruitment 2022: ಅರ್ಹತಾ ಮಾನದಂಡಗಳು: ಆಯಾ ವಿಭಾಗಕ್ಕೂ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.
NHB Recruitment 2022: ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ. 850/- (ಅರ್ಜಿ ಶುಲ್ಕ ಮಾಹಿತಿಯ ಶುಲ್ಕ ಸೇರಿದಂತೆ) SC/ST/PWBD ವರ್ಗದ ಅಭ್ಯರ್ಥಿಗಳಿಗೆ- ರೂ. 175/- (ಇಂಟಿಮೇಶನ್ ಶುಲ್ಕಗಳು ಮಾತ್ರ)
NHB Recruitment 2022: ವಯೋಮಿತಿ: CXO ಹುದ್ದೆಗಳಿಗೆ – 40 ವರ್ಷದಿಂದ 57 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇಲ್ವಿಚಾರಣಾ ಅಧಿಕಾರಿ ಹುದ್ದೆಗಳಿಗೆ – 57 ವರ್ಷದಿಂದ 63 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
NHB Recruitment 2022: ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 22, 2022
NHB Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.