NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Aug 09, 2022 | 3:46 PM

NIA Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ
NIA Recruitment
Follow us on

NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ (NIA) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಸೆಕ್ಷನ್ ಆಫೀಸರ್/ಆಫೀಸ್ ಸೂಪರಿಂಟೆಂಡೆಂಟ್, ಅಸಿಸ್ಟೆಂಟ್, ಅಕೌಂಟೆಂಟ್, ಸ್ಟೆನೋಗ್ರಾಫರ್ ಗ್ರೇಡ್-I ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ (UDC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಹುದ್ದೆಗಳ ಸಂಖ್ಯೆ: 48
  • ವಿಭಾಗ ಅಧಿಕಾರಿ/ಕಚೇರಿ ಅಧೀಕ್ಷಕರು –  03 ಹುದ್ದೆಗಳು
  • ಸಹಾಯಕ –  09 ಹುದ್ದೆಗಳು
  • ಅಕೌಂಟೆಂಟ್ –  01 ಹುದ್ದೆ
  • ಸ್ಟೆನೋಗ್ರಾಫರ್ ಗ್ರೇಡ್-I – 23 ಹುದ್ದೆಗಳು
  • ಅಪ್ಪರ್ ಡಿವಿಷನ್ ಕ್ಲರ್ಕ್ (UDC) –  12 ಹುದ್ದೆಗಳು

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮಾಡಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಪ್ರಾವಿಣ್ಯತೆ ಹೊಂದಿರಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ ರೂ. 44900 ರಿಂದ ರೂ. 142400 ವೇತನ ಸಿಗಲಿದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 56 ವರ್ಷಗಳು ಮೀರಿರಬಾರದು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 28, 2022

ಅರ್ಜಿ ಕಳುಹಿಸಬೇಕಾದ ವಿಳಾಸ:
SP- NIA Office, NIA Building, Opp, Lodhi Rd, CGO Complex, New Delhi- 110003

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.