NIA Recruitment 2022: ರಾಷ್ಟ್ರೀಯ ತನಿಖಾ ಸಂಸ್ಥೆ, NIA ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎನ್‌ಐಎಯಲ್ಲಿ ಒಟ್ಟು 67 ಹೆಡ್ ಕಾನ್‌ಸ್ಟೆಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇವೆ. ಈ ನೇಮಕಾತಿಗಾಗಿ ಅರ್ಜಿ ನಮೂನೆಯನ್ನು NIA ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಡೌನ್‌ಲೋಡ್ ಮಾಡಬೇಕಾಗುತ್ತದೆ. ಅದರಂತೆ nia.gov.in ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಪೋಸ್ಟ್ ಮುಖಾಂತರ ಅರ್ಜಿ ಸಲ್ಲಿಸಬೇಕು. 12 ನೇ ತರಗತಿ ಉತ್ತೀರ್ಣರಾದವರು ಹೆಡ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಾಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ…
NIA Recruitment 2022: ಹುದ್ದೆಯ ವಿವರಗಳು:
ಸಬ್ ಇನ್ಸ್ಪೆಕ್ಟರ್ – 43 ಹುದ್ದೆಗಳು
ಹೆಡ್ ಕಾನ್ಸ್‌ಟೇಬಲ್ – 24 ಹುದ್ದೆಗಳು
NIA Recruitment 2022: ಶೈಕ್ಷಣಿಕ ಅರ್ಹತೆ:
ಸಬ್ ಇನ್ಸ್‌ಪೆಕ್ಟರ್ – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಹೆಡ್ ಕಾನ್ಸ್‌ಟೇಬಲ್ – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
NIA Recruitment 2022: ಅರ್ಜಿ ಕಳುಹಿಸಬೇಕಾದ ವಿಳಾಸ:
SP (Adm), NIA HQ,
Opposite CGO Complex,
Lodhi Road,
New Delhi- 110003
ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
http://www.davp.nic.in/WriteReadData/ADS/eng_19133_54_2122b.pdf
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!
ಇದನ್ನೂ ಓದಿ: IPL 2022: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಇವರೇ..!
ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?
(NIA Recruitment 2022: Government job vacancies for Assistant SI, Head Constable posts)