AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIA Recruitment 2023: ಪದವೀಧರರಿಗೆ ಉದ್ಯೋಗಾವಕಾಶ: ಆರಂಭಿಕ ವೇತನ 56 ಸಾವಿರ ರೂ.

NIA Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು NIAಯ ಅಧಿಕೃತ ವೆಬ್​ಸೈಡ್​ www.nia.gov.in ಅನ್ನು ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

NIA Recruitment 2023: ಪದವೀಧರರಿಗೆ ಉದ್ಯೋಗಾವಕಾಶ: ಆರಂಭಿಕ ವೇತನ 56 ಸಾವಿರ ರೂ.
jobs
TV9 Web
| Edited By: |

Updated on:Jan 02, 2023 | 2:36 PM

Share

NIA Recruitment 2023: ರಾಷ್ಟ್ರೀಯ ತನಿಖಾ ಸಂಸ್ಥೆಯು ( NIA) ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು NIAಯ ಅಧಿಕೃತ ವೆಬ್​ಸೈಡ್​ www.nia.gov.in ಅನ್ನು ಗೆ ಭೇಟಿ ನೀಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಉಪ ಪೊಲೀಸ್ ವರಿಷ್ಠಾಧಿಕಾರಿ- 38 ಹುದ್ದೆಗಳು
  • ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ- 11 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 49

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 56 ವರ್ಷಗಳು ಎಂದು ನಿಗದಿಪಡಿಸಲಾಗಿದೆ.

ಮಾಸಿಕ ವೇತನ:

  • ಉಪ ಪೊಲೀಸ್ ವರಿಷ್ಠಾಧಿಕಾರಿ- ರೂ. 56,100 ರಿಂದ 1,77,500/- ರೂ.
  • ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ- ರೂ. 67,700 ರಿಂದ– 2,08,700/- ರೂ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.

ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕೃತ ವೆಬ್​ಸೈಟ್ www.nia.gov.in ಗೆ ಹೋಗಬೇಕು. ಅಲ್ಲಿ ನೀಡಲಾಗಿರುವ ಅಧಿಸೂಚನೆಯ ಮೆನುವಿನ ಮೇಲೆ ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ  –  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ    ಈ ಲಿಂಕ್​​ಗಳ ಮೇಲೆ ಕ್ಲಿಕ್  ಮಾಡಿ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 14, 2023

Published On - 8:15 am, Fri, 30 December 22

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?