NIA Recruitment 2024 : ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಹಾಗೂ ಕೇಂದ್ರ ಗೃಹ ಇಲಾಖೆಯಲ್ಲಿ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿಯಿರುವ ಇನ್‌ಸ್ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಹುದ್ದೆಗಳ ವಿವರ, ವೇತನ ಶ್ರೇಣಿ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.

NIA Recruitment 2024 : ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 18, 2024 | 12:20 PM

ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ

* ಸಂಸ್ಥೆಯ ಹೆಸರು : ರಾಷ್ಟ್ರೀಯ ತನಿಖಾ ಸಂಸ್ಥೆ

* ಹುದ್ದೆಗಳು : ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್, ಸಹಾಯಕ ಸಬ್ ಇನ್ಸ್‌ಪೆಕ್ಟರ್ , ಹೆಡ್ ಕಾನ್ಸ್ಟೇಬಲ್

* ಖಾಲಿ ಹುದ್ದೆಗಳ ಸಂಖ್ಯೆ: 164

* ಉದ್ಯೋಗ ಸ್ಥಳ : ಭಾರತದಾದಂತ್ಯ

ಶೈಕ್ಷಣಿಕ ಅರ್ಹತೆ

* ಎನ್‌ಐಎ ಮಾನದಂಡಗಳ ಪ್ರಕಾರ ಇನ್ಸ್ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ಥಿಗಳು ಪದವಿ ಪಡೆದಿರಬೇಕು.

* ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೂ ನಿಗದಿತ ವಿಭಾಗದಲ್ಲಿ ಪದವಿ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ಹಾಗೂ ಆಯ್ಕೆ ಪ್ರಕ್ರಿಯೆ

* ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂಬಳದ ವಿವರಗಳು

* ಇನ್ಸ್‌ಪೆಕ್ಟರ್ : 44,900-1,42,400 ರೂ

* ಸಬ್ ಇನ್ಸ್‌ಪೆಕ್ಟರ್ : 35,400-1,12,400 ರೂ

* ಸಹಾಯಕ ಸಬ್ ಇನ್ಸ್‌ಪೆಕ್ಟರ್ : 29,200-92,300 ರೂ

* ಹೆಡ್ ಕಾನ್ಸ್ಟೇಬಲ್ : 25,500-81,700 ರೂ

ಇದನ್ನೂ ಓದಿ: ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವೆಬ್ಸೈಟ್ ಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಿ. ಈ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ SP (Adm), NIA HQ, CGO ಕಾಂಪ್ಲೆಕ್ಸ್ ಎದುರು, ಲೋಧಿ ರಸ್ತೆ, ನವದೆಹಲಿ-110003 ಈ ವಿಳಾಸಕ್ಕೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 11-11-2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26- 12- 2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಬಂಕ್​ಗೆ ನುಗ್ಗಿ ಸಿಬ್ಬಂದಿಗೆ ಥಳಿಸಿದ ಯುವಕರು
ಪೆಟ್ರೋಲ್ ಬಂಕ್​ಗೆ ನುಗ್ಗಿ ಸಿಬ್ಬಂದಿಗೆ ಥಳಿಸಿದ ಯುವಕರು
ಯೋಗೇಶ್ವರ್ ಮಾತಿಗೆ ವಿಪರೀತ ಅರ್ಥ ಕಲ್ಪಿಸುವುದು ಬೇಡ: ಪರಮೇಶ್ವರ್
ಯೋಗೇಶ್ವರ್ ಮಾತಿಗೆ ವಿಪರೀತ ಅರ್ಥ ಕಲ್ಪಿಸುವುದು ಬೇಡ: ಪರಮೇಶ್ವರ್
ಬಿಜೆಪಿಗೆ ಹಣದ ಕೊರತೆಯಿಲ್ಲ, ಹಣ ಚೆಲ್ಲಿ ಶಾಸಕರನ್ನು ಖರೀದಿಸುತ್ತಾರೆ: ಗಾಣಿಗ
ಬಿಜೆಪಿಗೆ ಹಣದ ಕೊರತೆಯಿಲ್ಲ, ಹಣ ಚೆಲ್ಲಿ ಶಾಸಕರನ್ನು ಖರೀದಿಸುತ್ತಾರೆ: ಗಾಣಿಗ
ಬ್ರೆಜಿಲ್​ನಲ್ಲಿ ಮಂತ್ರ-ಘೋಷಗಳೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಬ್ರೆಜಿಲ್​ನಲ್ಲಿ ಮಂತ್ರ-ಘೋಷಗಳೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಡಬಲ್ ವೈಲ್ಡ್ ಕಾರ್ಡ್​ ಎಂಟ್ರಿಗೆ ಬಿಗ್ ಬಾಸ್ ಮನೆ ಶೇಕ್; ಪ್ರಬಲರೇ ಟಾರ್ಗೆಟ್
ಡಬಲ್ ವೈಲ್ಡ್ ಕಾರ್ಡ್​ ಎಂಟ್ರಿಗೆ ಬಿಗ್ ಬಾಸ್ ಮನೆ ಶೇಕ್; ಪ್ರಬಲರೇ ಟಾರ್ಗೆಟ್
ಬಿಜೆಪಿಯಿಂದ 50 ಅಲ್ಲ, 100 ಕೋಟಿ ರೂ. ಆಫರ್: ರವಿಕುಮಾರ್​ ಗಣಿಗ ಮತ್ತೆ ಆರೋಪ
ಬಿಜೆಪಿಯಿಂದ 50 ಅಲ್ಲ, 100 ಕೋಟಿ ರೂ. ಆಫರ್: ರವಿಕುಮಾರ್​ ಗಣಿಗ ಮತ್ತೆ ಆರೋಪ
Video: ಆಂಬ್ಯುಲೆನ್ಸ್​ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ರೂ. ದಂಡ
Video: ಆಂಬ್ಯುಲೆನ್ಸ್​ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ರೂ. ದಂಡ
Daily Devotional: ಪುಣ್ಯ ಕ್ಷೇತ್ರಗಳಿಗೆ ಹೋದಾಗ ಆಹಾರ ಪದ್ಧತಿ ಹೇಗಿರಬೇಕು
Daily Devotional: ಪುಣ್ಯ ಕ್ಷೇತ್ರಗಳಿಗೆ ಹೋದಾಗ ಆಹಾರ ಪದ್ಧತಿ ಹೇಗಿರಬೇಕು
ಕಾರ್ತಿಕ ಸೋಮವಾರದಂದು ಯಾವೆಲ್ಲಾ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ
ಕಾರ್ತಿಕ ಸೋಮವಾರದಂದು ಯಾವೆಲ್ಲಾ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ
ಪಾಸ್ ತೋರಿಸಿ ಎಂದಿದ್ದಕ್ಕೆ ಬಿಎಂಟಿಸಿ ಸಿಬ್ಬಂದಿಗೆ ಆವಾಜ್ ಹಾಕಿದ ಪ್ರಯಾಣಿಕ
ಪಾಸ್ ತೋರಿಸಿ ಎಂದಿದ್ದಕ್ಕೆ ಬಿಎಂಟಿಸಿ ಸಿಬ್ಬಂದಿಗೆ ಆವಾಜ್ ಹಾಕಿದ ಪ್ರಯಾಣಿಕ