NIACL Assistant Recruitment 2024 : ನ್ಯೂ ಇಂಡಿಯಾ ಅನ್ಶೂರೆನ್ಸ್ ಕಂಪನಿ ಲಿಮಿಟೆಡ್ನಲ್ಲಿ 500 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯೂ ಇಂಡಿಯಾ ಅನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿಯಿರುವ ಸಹಾಯಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಕಂಪೆನಿಯಲ್ಲಿ 500 ಹುದ್ದೆಗಳು ಖಾಲಿಯಿದ್ದು, ಪದವಿ ಪಾಸಾಗಿದ್ದು ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಪ್ರಮುಖ ಮಾಹಿತಿಯನ್ನು ತಿಳಿದುಕೊಳ್ಳಿ. ಹುದ್ದೆಗಳಿಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಸೇರಿದಂತೆ ಎಲ್ಲಾ ಮಾಹಿತಿಯೂ ಇಲ್ಲಿದೆ.
ಪದವಿ ಪಾಸಾಗಿದ್ದು ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ. ಹಾಗಾದ್ರೆ ಈ ಸುವರ್ಣ ಅವಕಾಶವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಲೇಬೇಡಿ. ನ್ಯೂ ಇಂಡಿಯಾ ಅನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ 500 ಸಹಾಯಕ ಹುದ್ದೆಗಳು ಖಾಲಿಯಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ತಿಳಿದುಕೊಂಡು ಜನವರಿ 01, 2025 ರೊಳಗೆ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
* ಇಲಾಖೆ ಹೆಸರು : ನ್ಯೂ ಇಂಡಿಯಾ ಅನ್ಶೂರೆನ್ಸ್ ಕಂಪನಿ ಲಿಮಿಟೆಡ್
* ಹುದ್ದೆಗಳ ಹೆಸರು : ಸಹಾಯಕ ಹುದ್ದೆ
* ಒಟ್ಟು ಹುದ್ದೆಗಳು : 500
* ಉದ್ಯೋಗ ಸ್ಥಳ : ಭಾರತಾದ್ಯಂತ
* ವಿದ್ಯಾರ್ಹತೆ ಹಾಗೂ ವಯೋಮಿತಿ*
* ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಪಡೆದಿರಬೇಕು.
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
* ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 100 ರೂ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಆಯ್ಕೆ ವಿಧಾನ
* ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಿ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಡಿಸೆಂಬರ್ 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಜನವರಿ 2025
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ