ಪದವಿ ಪಾಸಾಗಿದ್ದು ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ. ಹಾಗಾದ್ರೆ ಈ ಸುವರ್ಣ ಅವಕಾಶವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಲೇಬೇಡಿ. ನ್ಯೂ ಇಂಡಿಯಾ ಅನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ 500 ಸಹಾಯಕ ಹುದ್ದೆಗಳು ಖಾಲಿಯಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ತಿಳಿದುಕೊಂಡು ಜನವರಿ 01, 2025 ರೊಳಗೆ ಅರ್ಜಿ ಸಲ್ಲಿಸಿ.
* ಇಲಾಖೆ ಹೆಸರು : ನ್ಯೂ ಇಂಡಿಯಾ ಅನ್ಶೂರೆನ್ಸ್ ಕಂಪನಿ ಲಿಮಿಟೆಡ್
* ಹುದ್ದೆಗಳ ಹೆಸರು : ಸಹಾಯಕ ಹುದ್ದೆ
* ಒಟ್ಟು ಹುದ್ದೆಗಳು : 500
* ಉದ್ಯೋಗ ಸ್ಥಳ : ಭಾರತಾದ್ಯಂತ
* ವಿದ್ಯಾರ್ಹತೆ ಹಾಗೂ ವಯೋಮಿತಿ*
* ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಪಡೆದಿರಬೇಕು.
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
* ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
* ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 100 ರೂ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
* ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಿ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಡಿಸೆಂಬರ್ 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಜನವರಿ 2025
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ