NIMHANS Recruitment 2023: ನಿಮ್ಹಾನ್ಸ್ನಲ್ಲಿದೆ ಉದ್ಯೋಗಾವಕಾಶ: ತಿಂಗಳ ವೇತನ 50 ಸಾವಿರ ರೂ.
NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ-ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು.
NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (NIMHANS) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ಸಿಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 9 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ( NIMHANS )
- ಹುದ್ದೆಗಳ ಸಂಖ್ಯೆ: 3
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
- ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್/ಸೈಕಾಲಜಿ, ಮಾಸ್ಟರ್ಸ್ ಆಫ್ ಸೋಶಿಯಲ್ ವರ್ಕ್, ಎಂಎಸ್ಸಿ ಸೈಕಾಲಜಿಯಲ್ಲಿ ಎಂ.ಫಿಲ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ-ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ಸಹ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 50 ಸಾವಿರ ರೂ. ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇ-ಮೇಲ್ ಐಡಿ, csp.nimhans@gmail.com ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಪ್ರಮುಖ ದಿನಾಂಕ:
ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಏಪ್ರಿಲ್ 9, 2023
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 2:26 pm, Thu, 30 March 23