NIMHANS Recruitment 2023: ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ: ತಿಂಗಳ ವೇತನ 32 ಸಾವಿರ ರೂ.

TV9kannada Web Team

TV9kannada Web Team | Edited By: Zahir PY

Updated on: Jan 22, 2023 | 2:20 PM

NIMHANS Recruitment 2023: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2. ಹೀಗಾಗಿ ಈ ತಿಂಗಳಳೊಳಗೆ ಅರ್ಜಿ ಸಲ್ಲಿಸಬಹುದು ಉತ್ತಮ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

NIMHANS Recruitment 2023: ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ: ತಿಂಗಳ ವೇತನ 32 ಸಾವಿರ ರೂ.
NIMHANS Recruitment 2023

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಸಂಸ್ಥೆಯು ಬಯೋಇನ್ಫರ್ಮ್ಯಾಟಿಷಿಯನ್/ಬಯೋ-ಸ್ಟ್ಯಾಟಿಸ್ಟಿಶಿಯನ್ (Bioinformatician/Bio-Statistician) ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2. ಹೀಗಾಗಿ ಈ ತಿಂಗಳಳೊಳಗೆ ಅರ್ಜಿ ಸಲ್ಲಿಸಬಹುದು ಉತ್ತಮ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಬಯೋಇನ್ಫರ್ಮ್ಯಾಟಿಷಿಯನ್/ಬಯೋ-ಸ್ಟ್ಯಾಟಿಸ್ಟಿಶಿಯನ್- 1 ಹುದ್ದೆ

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು BE / B.Tech, M.Tech in CSE ಅಥವಾ M.Sc…ಇವುಗಳಲ್ಲಿ ಯಾವುದಾದರೂ ಒಂದು ಪದವಿಯನ್ನು ಹೊಂದಿರಬೇಕಾಗುತ್ತದೆ.

Also Read: LIC Recruitment 2023: ಎಲ್​ಐಸಿ ಉದ್ಯೋಗಾವಕಾಶ: ಪದವೀಧರರು ಅರ್ಜಿ ಸಲ್ಲಿಸಿ

ವಯೋಮಿತಿ:

ಈ ಹುದ್ದೆಗಳಿಗೆ 40 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ. ಹೀಗಾಗಿ ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 32 ಸಾವಿರ ರೂ. ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಶಾರ್ಟ್​ಲೀಸ್ಟ್​ ಮಾಡಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 2, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada