NIMHANS Recruitment 2023: ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ: ವೇತನ 20 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Jul 23, 2023 | 4:27 PM

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

NIMHANS Recruitment 2023: ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ: ವೇತನ 20 ಸಾವಿರ ರೂ.
NIMHANS Recruitment 2023
Follow us on

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್​ನಲ್ಲಿನ (NIMHANS) ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಫೀಲ್ಡ್ ವರ್ಕರ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
  • ಹುದ್ದೆಗಳ ಸಂಖ್ಯೆ: 3
  • ಉದ್ಯೋಗ ಸ್ಥಳ: ಕೋಲಾರ, ಬೆಳಗಾವಿ, ಮಂಡ್ಯ, ಉಡುಪಿ
  • ಹುದ್ದೆಯ ಹೆಸರು: ಫೀಲ್ಡ್ ವರ್ಕರ್

ಶೈಕ್ಷಣಿಕ ಅರ್ಹತೆ:

NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc , BA, MSW ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ.20000/- ಸಿಗಲಿದೆ.

ಪ್ರಮುಖ ದಿನಾಂಕ:

ನೇರ ಸಂದರ್ಶನ ನಡೆಯುವ ದಿನಾಂಕ: 25-ಜುಲೈ-2023

ಇದನ್ನೂ ಓದಿ: IREL Recruitment 2023: ಐಆರ್​ಇಎಲ್ ನೇಮಕಾತಿ: ಆರಂಭಿಕ ವೇತನ 40 ಸಾವಿರ ರೂ.

ನೇರ ಸಂದರ್ಶನದ ನಡೆಯುವ ಸ್ಥಳದ ವಿಳಾಸ:

Board Room, NBRC Building, 1st floor, NIMHANS, Bengaluru-560029

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್​ಸೈಟ್​: nimhans.ac.in