NIMHANS Recruitment 2025: ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ಸಂಶೋಧನಾ ಸಹವರ್ತಿ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಒಟ್ಟು 06 ಹುದ್ದೆಗಳಿಗೆ ನೇರ ಸಂದರ್ಶನ ನವೆಂಬರ್ 11 ರಂದು ನಡೆಯಲಿದೆ. ಮಾಸಿಕ 38,458-50,000 ರೂ. ವೇತನದೊಂದಿಗೆ, 35 ವರ್ಷದೊಳಗಿನ ಅಭ್ಯರ್ಥಿಗಳು ಈ ಸರ್ಕಾರಿ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ(NIMHANS)ಯು ಅಧಿಕೃತ ಅಧಿಸೂಚನೆಯ ಮೂಲಕ ಸಂಶೋಧನಾ ಸಹವರ್ತಿ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 11 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಿ.
ನಿಮ್ಹಾನ್ಸ್ ಹುದ್ದೆಯ ಅಧಿಸೂಚನೆ:
- ಹುದ್ದೆಗಳ ಸಂಖ್ಯೆ: 06
- ಉದ್ಯೋಗ ಸ್ಥಳ: ಬೆಂಗಳೂರು
- ಹುದ್ದೆ ಹೆಸರು: ಸಂಶೋಧನಾ ಸಹವರ್ತಿ ಮತ್ತು ಸಹಾಯಕ
- ವೇತನ: ತಿಂಗಳಿಗೆ 38458-50000 ರೂ.
ವಯಸ್ಸಿನ ಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.
ಇದನ್ನೂ ಓದಿ: ರೈಲ್ವೆಯಲ್ಲಿ 8500 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು .
ಸಂದರ್ಶನ ನಡೆಯುವ ಸ್ಥಳ: NBRC ಕಟ್ಟಡದ 4 ನೇ ಮಹಡಿಯಲ್ಲಿರುವ ಬೋರ್ಡ್ ರೂಮ್ ಮತ್ತು ಪರೀಕ್ಷಾ ಹಾಲ್, NIMHANS
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




