
ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NITK) ಅಧಿಕೃತ ಅಧಿಸೂಚನೆಯ ಮೂಲಕ ಮಂಗಳೂರಿನ ಸುರತ್ಕಲ್ನಲ್ಲಿರುವ ಸಂಸ್ಥೆಗೆ BIM ಲ್ಯಾಬ್ ಮ್ಯಾನೇಜರ್, ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 16 ರೊಳಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಉಪಯುಕ್ತ ಮಾಹಿತಿ ಇಲ್ಲಿದೆ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ bcrajasekaran@nitk.edu.in ಇ-ಮೇಲ್ ಐಡಿಗೆ ಮಾರ್ಚ್ 16 ರಂದು ಅಥವಾ ಅದಕ್ಕೂ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು. ಬಳಿಕ ನಿಗದಿತ ದಿನಾಂಕದಂದು ನೇರ ಸಂದರ್ಶನದಲ್ಲಿ ಭಾಗಿಯಾಗಬೇಕು.
ವಾಕ್-ಇನ್ ಸಂದರ್ಶನ ಸ್ಥಳದ ವಿವರಗಳು:
ಸಿವಿಲ್ ಎಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್, ಕರ್ನಾಟಕ
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ