AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು!

NLC ಇಂಡಿಯಾ ಲಿಮಿಟೆಡ್ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಹತೆಯುಳ್ಳವರಿಗೆ 575 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳಿಗೆ ಆಸಕ್ತರು nlcindia.in ಮೂಲಕ ಜನವರಿ 2ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹಾರ್ಡ್ ಕಾಪಿ ಸಲ್ಲಿಸಲು ಜನವರಿ 9 ಕೊನೆಯ ದಿನ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಸ್ಟೈಫಂಡ್ ಕುರಿತು ಸಂಪೂರ್ಣ ಮಾಹಿತಿ ಲಭ್ಯ.

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು!
ಅಪ್ರೆಂಟಿಸ್​ಗಳ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Dec 21, 2025 | 6:01 PM

Share

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ.

ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳು ಸೇರಿವೆ. ಈ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ಅರ್ಹತೆಗಳು ಮತ್ತು ಆಯ್ಕೆ ಪ್ರಕ್ರಿಯೆಯನ್ನು ಹೇಗೆ ನಡೆಸಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅರ್ಹತಾ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ, ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಹೊಂದಿರಬೇಕು. ಅರ್ಜಿದಾರರು ಅಪ್ರೆಂಟಿಸ್‌ಶಿಪ್ ನಿಯಮಗಳ ಪ್ರಕಾರ ವಯಸ್ಸಿನ ಅವಶ್ಯಕತೆಗಳನ್ನು ಪೂರೈಸಬೇಕು. ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಖಾಲಿ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • ಕಂಪನಿಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಿರುವ ವೃತ್ತಿ ವಿಭಾಗಕ್ಕೆ ಹೋಗಿ.
  • ಇಲ್ಲಿ ಟ್ರೈನಿ ಮತ್ತು ಅಪ್ರೆಂಟಿಸ್ ಮೇಲೆ ಕ್ಲಿಕ್ ಮಾಡಿ.
  • ಈಗ ಅಡ್ವಟ್ ನಂ. L&DC/04A/2025 ಅಡಿಯಲ್ಲಿ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಶುಲ್ಕವನ್ನು ಪಾವತಿಸಿದ ನಂತರ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಸಲ್ಲಿಸಿ.

ಅಭ್ಯರ್ಥಿಗಳು ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಜನವರಿ 9 ರಂದು ಸಂಜೆ 5 ಗಂಟೆಯೊಳಗೆ ಜನರಲ್ ಮ್ಯಾನೇಜರ್, ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ, ಬ್ಲಾಕ್-20, NLC ಇಂಡಿಯಾ ಲಿಮಿಟೆಡ್, ನೆಯ್ವೇಲಿ 607 803 ಗೆ ಸಲ್ಲಿಸಬೇಕು ಎಂಬುದನ್ನು ಗಮನಿಸಬೇಕು.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ ಏನು?

ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,028 ಸ್ಟೈಫಂಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳಿಗೆ 12,524 ರೂ. ಸ್ಟೈಫಂಡ್ ನೀಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ