NLC India Recruitment 2022: ಎನ್ಎಲ್ಸಿ ನೇಮಕಾತಿ: 481 ಹುದ್ದೆಗಳಿಗೆ ಅರ್ಜಿ ಆಹ್ವಾನ
NLC India Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ನ ಅಧಿಕೃತ ವೆಬ್ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
NLC India Recruitment 2022: ಸರ್ಕಾರಿ ಸೌಮ್ಯದ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಕಂಪೆನಿಯು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ನ ಅಧಿಕೃತ ವೆಬ್ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ- 481
- ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್: 201 ಹುದ್ದೆಗಳು
- ಇಂಜಿನಿಯರಿಂಗ್ ಅಲ್ಲದ ಪದವೀಧರ ಅಪ್ರೆಂಟಿಸ್: 105 ಹುದ್ದೆಗಳು
- ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್: 175 ಹುದ್ದೆಗಳು
ಅರ್ಹತಾ ಮಾನದಂಡಗಳು: ಆಯಾ ವಿಭಾಗಕ್ಕೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಆಯ್ಕೆ ಪ್ರಕ್ರಿಯೆ: ಡಿಪ್ಲೊಮಾ/ಪದವಿಯಲ್ಲಿ ಅಭ್ಯರ್ಥಿಗಳು ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 24, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.