ಅತಿಥಿ ಉಪನ್ಯಾಸಕರ ಉದ್ಯೋಗ ನಷ್ಟ ಆತಂಕ ಅನಗತ್ಯ: ಕಾಲೇಜು ಶಿಕ್ಷಣ ಆಯುಕ್ತ ಪ್ರದೀಪ್

ಪ್ರಸ್ತುತ 14,000 ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ 10,600 ಮಂದಿಯನ್ನು ಮುಂದಿನ ವರ್ಷ ಮತ್ತೊಮ್ಮೆ ಅತಿಥಿ ಉಪನ್ಯಾಸಕರಾಗಿ ನೇಮಿಸಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಅತಿಥಿ ಉಪನ್ಯಾಸಕರ ಉದ್ಯೋಗ ನಷ್ಟ ಆತಂಕ ಅನಗತ್ಯ: ಕಾಲೇಜು ಶಿಕ್ಷಣ ಆಯುಕ್ತ ಪ್ರದೀಪ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 03, 2022 | 10:25 PM

ಬೆಂಗಳೂರು: ನೇಮಕಾತಿ ನಿಯಮಾವಳಿಗಳಲ್ಲಿ ರಾಜ್ಯ ಸರ್ಕಾರವು ಬದಲಾವಣೆ ಮಾಡಿರುವುದರಿಂದ ಕೆಲ ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳಬಹುದು ಎಂಬ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ಹಿರಿತನ ಹಾಗೂ ಅರ್ಹತೆಗೆ ಆದ್ಯತೆ ನೀಡಲಾಗುವುದು. 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ನೇಮಕಾತಿ ಮಾಡಲಾಗುವುದು. ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ 9800 ಮಂದಿ ಕೆಲಸ ಕಳೆದುಕೊಳ್ಳುವುದು ವಾಸ್ತವಕ್ಕೆ ದೂರವಾದ ವಿಚಾರ. ರಾಜ್ಯದಲ್ಲಿ ಪ್ರಸ್ತುತ 14,000 ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ 10,600 ಮಂದಿಯನ್ನು ಮುಂದಿನ ವರ್ಷ ಮತ್ತೊಮ್ಮೆ ಅತಿಥಿ ಉಪನ್ಯಾಸಕರಾಗಿ ನೇಮಿಸಿಕೊಳ್ಳಲಾಗುವುದು. ಅತಿಥಿ ಉಪನ್ಯಾಸಕರಾಗಿ ನೇಮಕಗೊಳ್ಳುವವರಿಗೆ ಕಾರ್ಯಭಾರ ವಿವರಿಸುವುದರೊಂದಿಗೆ ವೇತನವನ್ನೂ ಸೂಕ್ತ ರೀತಿಯಲ್ಲಿ ನಿಗದಿಪಡಿಸಲಾಗುವುದು ಎಂದು ಹೇಳಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಸೇವಾ ಹಿರಿತನ, ವಯಸ್ಸು ಮತ್ತು ಯುಜಿಸಿ ನಿಗದಿಪಡಿಸಿರುವ ಅರ್ಹತೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಮೆರಿಟ್ ಪಟ್ಟಿಯನ್ನೂ ನಿಯಮಾನುಸಾರ ಮೆರಿಟ್ ಸಿದ್ಧಪಡಿಸಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ 14,000 ಜನರ ಪೈಕಿ ಕೇವಲ 3,400 ಮಂದಿ ಅನುಭವ ಕೊರತೆಯ ಕಾರಣ ಈ ಬಾರಿ ಆಯ್ಕೆ ಆಗುತ್ತಿಲ್ಲ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಈವರೆಗೂ ಅತಿಥಿ ಉಪನ್ಯಾಸಕರ ಗರಿಷ್ಠ ಮಾಸಿಕ ವೇತನ ₹ 13 ಸಾವಿರದ ಒಳಗೇ ಇರುತ್ತಿತ್ತು. ಆದರೆ ಮುಂದಿನ ದಿನಗಳಲ್ಲಿ ಈ ಮೊತ್ತವನ್ನು ಗರಿಷ್ಠ 32 ಸಾವಿರಕ್ಕೆ ನಿಗದಿಗೊಳಿಸಲಾಗಿದೆ. ಅತಿಥಿ ಉಪನ್ಯಾಸಕರ ಹುದ್ದೆಗೆ 60 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಇದುವರೆಗೆ ಅತಿಥಿ ಉಪನ್ಯಾಸಕರಾಗಿ ಕೆಲಸ‌ ಮಾಡಿದರವರನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ ಕರ್ನಾಟಕದ ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ, ‘ರಾಜ್ಯದ 9881 ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು ಬಂದಿದೆ. ಅತಿಥಿ ಉಪನ್ಯಾಸಕರಿಗೆ ಎದುರಾಗಿರುವ ಸಮಸ್ಯೆನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ಬಗೆಹರಿಸಬೇಕು. ಸರ್ಕಾರಕ್ಕೆ ಆರು ತಿಂಗಳು ತುಂಬಿದ ಮೇಲೆ ಸಾಧನೆಗಳ ಪುಸ್ತಕವೂ ಹೊರಬಂತು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ʼನಲ್ಲಿ ಅದ್ಧೂರಿ ಕಾರ್ಯಕ್ರಮವೂ ನಡೆಯಿತು. ಬಣ್ಣಬಣ್ಣದ ಜಾಹೀರಾತುಗಳ ಮೂಲಕ ಮಾಡದ ಕೆಲಸಗಳ ಬಗ್ಗೆ ಕೊಚ್ಚಿಕೊಂಡಿದ್ದೂ ಆಯಿತು. ಸ್ವ-ಗುಣಗಾನ ಇನ್ನೂ ನಿಂತಿಲ್ಲ. ಆದರೆ, 9,881 ಅತಿಥಿ ಉಪನ್ಯಾಸಕರು ಬೀದಿಗೆ ಬಿದ್ದಿದ್ದಾರೆ’ ಎಂದು ಎಚ್​ಡಿಕೆ ಸರಣಿ ಟ್ವೀಟ್ ಮಾಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣದ ಮೂಲಕ ಭಾರತವು ಜ್ಞಾನದ ಕಾಶಿ ಆಗಬೇಕು ಎನ್ನುವ ಬಿಜೆಪಿ ಪಕ್ಷವು ಭಾರತವು ವಿಶ್ವಗುರು ಆಗಬೇಕು ಎನ್ನುತ್ತಿದೆ. ಕರ್ನಾಟಕ ಭಾರತದ ಶೈಕ್ಷಣಿಕ ರಾಜಧಾನಿ ಆಗಬೇಕು ಎನ್ನುವ ಆಕಾಂಕ್ಷೆಯು ಅತಿಥಿ ಉಪನ್ಯಾಸಕರನ್ನು ಕಿತ್ತೊಗೆಯುವ ಮೂಲಕ ಸಾಧಿಸಲು ಸಾಧ್ಯವೇ? ದೇಶ ಕಟ್ಟುವುದರಲ್ಲಿ ಶಿಕ್ಷಣ ನಿರ್ಣಾಯಕವಾಗಲಿದ್ದು, ಈ ಶಿಕ್ಷಣ ವ್ಯವಸ್ಥೆಗೆ ಗುರುವೇ ನಾಯಕನಾಗಿತ್ತಾರೆ. ಆದರೆ ಇಂದು ಕಲಿಸುವ ಗುರು ದಿಕ್ಕಿಲ್ಲದೆ ಬೀದಿಯಲ್ಲಿ ನಿಂತಿದ್ದಾನೆ. ಸರ್ಕಾರ ಹೇಳುವುದು ಒಂದು, ಮಾಡುವುದು ಇನ್ನೊಂದು ಆಗುತ್ತಿದೆ. ಸರ್ಕಾರಿ ಉನ್ನತ ಶಿಕ್ಷಣ ವ್ಯವಸ್ಥೆಯ ಕತ್ತು ಹಿಸುಕಿ, ವ್ಯವಸ್ಥಿತವಾಗಿ ಖಾಸಗಿ ವಲಯವನ್ನು ಬಲಪಡಿಸುವ ಹುನ್ನಾರ ನಡೆದಿದೆ. ಆ ಮೂಲಕ ಮಕ್ಕಳು-ಪೋಷಕರನ್ನು ಖಾಸಗಿ ಸಂಸ್ಥೆಗಳ ಗುಲಾಮರನ್ನಾಗಿ ಮಾಡುವ ಅನುಮಾನ ಬರುತ್ತಿದೆ ಎಂದಿದ್ದಾರೆ.

ಅತಿಥಿ ಉಪನ್ಯಾಸಕರ ಆಯ್ಕೆಯಲ್ಲಿ ಶೈಕ್ಷಣಿಕ ಅರ್ಹತೆ, ಹಿರಿತನ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳುತ್ತಿದ್ದಾರೆ. ಹಾಗಾದರೆ, ಇವೆರಡೂ ಅರ್ಹತೆ ಇಲ್ಲದಿದ್ದ ಮೇಲೆ ಇವರನ್ನು ಇಷ್ಟು ದಿನ ಕನಿಷ್ಠ ಸಂಬಳಕ್ಕೆ ಏಕೆ ದುಡಿಸಿಕೊಂಡಿರಿ. ಕಾನೂನಿನಲ್ಲಿ ಅದಕ್ಕೆ ಅವಕಾಶವಿತ್ತಾ. ಆರೇ ತಿಂಗಳಲ್ಲಿ ಅಭಿವೃದ್ಧಿ ಹರಿಕಾರರಾಗುವುದು ಎಂದರೆ ಇದೇನಾ? ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂದರೆ ನಿರುದ್ಯೋಗ ಸೃಷ್ಟಿಯಾ? ಸರ್ಕಾರ ಇರುವುದು ಸಬೂಬು ಹೇಳುವುದಕ್ಕಲ್ಲ, ಕಾರಣ ಹೇಳಿ ಪಲಾಯನ ಮಾಡುವುದಕ್ಕಲ್ಲ. ನ್ಯಾಯ ಕೊಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ವಹಿಸಬೇಕು ಎಂದು ಅವರು ಟ್ವೀಟ್​ಗಳಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Salary Hike: ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ ಇದನ್ನೂ ಓದಿ: ದಯಾಮರಣ ಕೋರಿ ಹಾಸನದ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿ, ಸಿಎಂಗೆ ಪತ್ರ

Published On - 10:23 pm, Thu, 3 February 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು