NPCIL Recruitment 2023: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ನೇಮಕಾತಿ: PUC ಪಾಸಾದವರಿಗೆ ಸುವರ್ಣಾವಕಾಶ

| Updated By: ಝಾಹಿರ್ ಯೂಸುಫ್

Updated on: Feb 06, 2023 | 9:06 PM

NPCIL Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರಿಂದ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

NPCIL Recruitment 2023: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ನೇಮಕಾತಿ: PUC ಪಾಸಾದವರಿಗೆ ಸುವರ್ಣಾವಕಾಶ
NPCIL Recruitment 2023
Follow us on

NPCIL Recruitment 2023: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NPCIL) 193 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಫೆಬ್ರವರಿ 8 ರಿಂದ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೀಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆಯ ನಂತರ ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ, ಅರ್ಹತಾ ಮಾನದಂಡಗಳ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ನರ್ಸ್-ಎ (ಪುರುಷ-ಮಹಿಳೆ)- 26 ಹುದ್ದೆಗಳು
  • ಲ್ಯಾಬ್ ಟೆಕ್ನಿಷಿಯನ್- 3 ಹುದ್ದೆಗಳು
  • ಫಾರ್ಮಾಸಿಸ್ಟ್- 4 ಹುದ್ದೆಗಳು
  • ಸ್ಟೈಪೆಂಡರಿ ಟ್ರೈನಿ/ಡೆಂಟಲ್ ಟೆಕ್ನಿಷಿಯನ್- 1 ಹುದ್ದೆ
  • ಎಕ್ಸ್-ರೇ ತಂತ್ರಜ್ಞ- 1 ಹುದ್ದೆ
  • ಸ್ಟೈಪೆಂಡಿಯರಿ ಟ್ರೈನಿ/ ತಂತ್ರಜ್ಞ- 158 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 193

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳೊಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಅಥವಾ ISC ಅನ್ನು ವಿಜ್ಞಾನ ಸ್ಟ್ರೀಮ್‌ನಲ್ಲಿ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳೊಂದಿಗೆ) ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು. ಹಾಗೆಯೇ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಸರ್ಕಾರಿ ನಿಯಮಗಳ ಪ್ರಕಾರ SC/ST/OBC/PWD/PH ಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿ ಸಿಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಇದಾಗ್ಯೂ SC/ ST/ PwD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ (ಪೋಸ್ಟ್‌ಗೆ ಅಗತ್ಯವಿದ್ದರೆ)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ- ಫೆಬ್ರವರಿ 8, 2023
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 28, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.