NWKRTC Recruitment 2025: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು (NWKRTC) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯಿಂದ ಪದವೀಧರರಾದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ ಸಡಿಲಿಕೆ ಮತ್ತು ಅರ್ಜಿ ಶುಲ್ಕದ ವಿವರಗಳು ಲಭ್ಯ. ಕರ್ನಾಟಕ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ. ಆಸಕ್ತರು ನವೆಂಬರ್ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು ( NWKRTC) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 10 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಹತಾ ವಿವರಗಳು:
- ಶೈಕ್ಷಣಿಕ ಅರ್ಹತೆ: NWKRTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, 12 ನೇ, ಪದವಿ , ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು.
- ವಯಸ್ಸಿನ ಮಿತಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತಿದೆ.
- ಅರ್ಜಿ ಶುಲ್ಕ: 2A, 2B, 3A, 3B ಅಭ್ಯರ್ಥಿಗಳು ರೂ.750, SC/ST, ಮಾಜಿ ಸೇನಾ ಅಭ್ಯರ್ಥಿಗಳು 500 ರೂ. ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳ 250 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಇದನ್ನೂ ಓದಿ: ಸರ್ಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು
ಅರ್ಜಿ ಸಲ್ಲಿಸುವುದು ಹೇಗೆ?
- ನೀಡಲಾದ NWKRTC ಅರ್ಜಿ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- NWKRTC ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
- NWKRTC ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
- ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಕ್ಯಾಪ್ಟರ್ ಮಾಡಿ ಇಟ್ಟುಕೊಳ್ಳಿ.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:26 pm, Sun, 12 October 25




