ಅ. 3ರಂದು PSI ಪರೀಕ್ಷೆ: ಅಕ್ರಮ ತಡೆಯಲು ಕಠಿಣ ರೂಲ್ಸ್

ಪಿಎಸ್​ಐ ಆಕಾಂಕ್ಷಿಗಳು ಕಾತರದಿಂದ ಕಾಯುತ್ತಿದ್ದ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತೀರ್ಮಾನಿಸಿದೆ. ಇನ್ನು ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಅ. 3ರಂದು PSI ಪರೀಕ್ಷೆ: ಅಕ್ರಮ ತಡೆಯಲು ಕಠಿಣ ರೂಲ್ಸ್
ಅ. 3ರಂದು PSI ಪರೀಕ್ಷೆ
Follow us
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 01, 2024 | 7:24 PM

ಬೆಂಗಳೂರು, ಅ.01: ಪರೀಕ್ಷಾರ್ಥಿಗಳು ಕಾತರದಿಂದ ಕಾಯುತ್ತಿದ್ದ 402 ಪಿಎಸ್​ಐ(PSI) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತೀರ್ಮಾನಿಸಿದೆ. ಈ ಹಿನ್ನಲೆ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಪರೀಕ್ಷೆಗೆ ಅರ್ಹರಾಗಿರುವ 66,990 ಅಭ್ಯರ್ಥಿಗಳು

ಇನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಬರೆಯಲು 66,990 ಅರ್ಹರಾಗಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಪರೀಕ್ಷಾರ್ಥಿಗಳು ಅರ್ಧ ಗಂಟೆ ಮೊದಲೇ ಕೇಂದ್ರದೊಳಗೆ ಇರಬೇಕು. ಒಮ್ಮೆ ಒಳಗೆ ಹೋದರೆ ಪರೀಕ್ಷೆ ಮುಗಿದ ನಂತರವೇ ಹೊರಬರಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ವಿವರ

ಅಷ್ಟೇ ಅಲ್ಲ, ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು‌‌ ಎಚ್ಚರಿಸಿದ್ದಾರೆ.

ಕಮಾಂಡ್ ಸೆಂಟರ್ ಸ್ಥಾಪನೆ

ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.

ಯಾರದೊ ಹೆಸರಿನಲ್ಲಿ ಬೇರೆ ಯಾರೋ ಪರೀಕ್ಷೆ ಬರೆಯುವುದನ್ನು ತಡೆಯಲು ಈ ಬಾರಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವೇಳೆ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜೊತೆಗೆ ಆನ್​ಲೈನ್​ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Tue, 1 October 24

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ