Oil India Recruitment 2022: ಆಯಿಲ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

OIL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಆಯಿಲ್​ನ ಅಧಿಕೃತ ವೆಬ್‌ಸೈಟ್‌  oil-india.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Oil India Recruitment 2022: ಆಯಿಲ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Oil India Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 08, 2022 | 9:25 PM

ಭಾರತ ಸರ್ಕಾರದ ಅಧೀನದಲ್ಲಿರುವ ಆಯಿಲ್ ಇಂಡಿಯಾ ಲಿಮಿಟೆಡ್ ( Oil India Recruitment 2022 )ನ ಗ್ರೇಡ್ ಬಿ ಮತ್ತು ಗ್ರೇಡ್ ಸಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಆಯಿಲ್​ನ ಅಧಿಕೃತ ವೆಬ್‌ಸೈಟ್‌  oil-india.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಮುಂತಾದ ನೇಮಕಾತಿಯ ಪ್ರಮುಖ ಮಾಹಿತಿಯನ್ನು ಕೆಳಗಿನಂತಿವೆ.

Oil India Recruitment 2022 ಹುದ್ದೆಯ ವಿವರಗಳು: ಒಟ್ಟು ಹುದ್ದೆಗಳು- 55 ಮ್ಯಾನೇಜರ್ (ERP-HR) – 1 ಹುದ್ದೆ, ಸೂಪರಿಂಟೆಂಡಿಂಗ್ ಇಂಜಿನಿಯರ್ (ಪರಿಸರ) – 2 ಹುದ್ದೆಗಳು ಹಿರಿಯ ಅಧಿಕಾರಿ (ಇನ್‌ಸ್ಟ್ರುಮೆಂಟೇಶನ್) – 6 ಹುದ್ದೆಗಳು ಸೂಪರಿಂಟೆಂಡಿಂಗ್ ಮೆಡಿಕಲ್ ಆಫೀಸರ್ (ರೇಡಿಯಾಲಜಿ) – 1 ಹುದ್ದೆ ಸೂಪರಿಂಟೆಂಡಿಂಗ್ ಮೆಡಿಕಲ್ ಆಫೀಸರ್ (ಪೀಡಿಯಾಟ್ರಿಕ್ಸ್) – 1 ಹುದ್ದೆ ಹಿರಿಯ ವೈದ್ಯಕೀಯ ಅಧಿಕಾರಿ – 1 ಹುದ್ದೆ ಹಿರಿಯ ಸೆಕ್ಯುರಿಟಿ ಆಫೀಸರ್ – 1 ಹುದ್ದೆ ಹಿರಿಯ ಅಧಿಕಾರಿ (ಸಿವಿಲ್) – 2 ಹುದ್ದೆಗಳು ಹಿರಿಯ ಅಧಿಕಾರಿ (ಎಲೆಕ್ಟ್ರಿಕಲ್) – 8 ಹುದ್ದೆಗಳು ಹಿರಿಯ ಅಧಿಕಾರಿ (ಮೆಕ್ಯಾನಿಕಲ್) – 20 ಹುದ್ದೆಗಳು ಹಿರಿಯ ಅಧಿಕಾರಿ (ಸಾರ್ವಜನಿಕ-ವ್ಯವಹಾರಗಳು) – 4 ಹುದ್ದೆಗಳು ಹಿರಿಯ ಅಕೌಂಟ್ಸ್ ಆಫೀಸರ್ ಅಥವಾ ಸೀನಿಯರ್ ಆಂತರಿಕ ಲೆಕ್ಕ ಪರಿಶೋಧಕರು – 5 ಹುದ್ದೆಗಳು ಹಿರಿಯ ಅಧಿಕಾರಿ (ಎಚ್‌ಆರ್) – 3 ಹುದ್ದೆಗಳು

Oil India Recruitment 2022 ಶೈಕ್ಷಣಿಕ ವಿದ್ಯಾರ್ಹತೆ: ಮ್ಯಾನೇಜರ್ (ERP-HR): ಅಭ್ಯರ್ಥಿಗಳು ಕನಿಷ್ಠ 65 ಶೇಕಡಾ ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು. ಹಿರಿಯ ಅಧಿಕಾರಿ (ಮೆಕ್ಯಾನಿಕಲ್): ಅಭ್ಯರ್ಥಿಗಳು ಕನಿಷ್ಠ 65% ಅಂಕಗಳೊಂದಿಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹಿರಿಯ ಅಧಿಕಾರಿ (ಸಾರ್ವಜನಿಕ ವ್ಯವಹಾರಗಳು): ಅಭ್ಯರ್ಥಿಗಳು ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಸಮೂಹ ಸಂವಹನ ಅಥವಾ ಸಾರ್ವಜನಿಕ ಸಂಪರ್ಕ ಅಥವಾ ಸಮಾಜ ಕಾರ್ಯ ಅಥವಾ ಗ್ರಾಮೀಣ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಸೀನಿಯರ್ ಅಕೌಂಟ್ಸ್ ಆಫೀಸರ್ ಅಥವಾ ಸೀನಿಯರ್ ಆಂತರಿಕ ಅಧಿಕಾರಿ: ಅಭ್ಯರ್ಥಿಯು ICAI/ICMAI ನ ಸಹಾಯಕ ಸದಸ್ಯರಾಗಿರಬೇಕು. ಹಿರಿಯ ವೈದ್ಯಕೀಯ ಅಧಿಕಾರಿ: ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದ ಪ್ರತಿಷ್ಠಿತ ವೈದ್ಯಕೀಯ ಕಾಲೇಜು/ವಿಶ್ವವಿದ್ಯಾಲಯದಿಂದ MBBS ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಹಿರಿಯ ಭದ್ರತಾ ಅಧಿಕಾರಿ: ಅಭ್ಯರ್ಥಿಗಳು ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು.

Oil India Recruitment 2022 ಆಯ್ಕೆ ಪ್ರಕ್ರಿಯೆ: ಅರ್ಹ ಅಥವಾ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಗುಂಪು ಚರ್ಚೆ (GD) ಅಥವಾ ಗುಂಪು ಟಾಸ್ಕ್ (GT) ಮತ್ತು ವೈಯಕ್ತಿಕ ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ.

Oil India Recruitment 2022 ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 15, 2022

Oil India Recruitment 2022 ವೇತನ? ಆಯಾ ಹುದ್ದೆಗಳಿಗೆ ತಕ್ಕಂತೆ 60 ಸಾವಿರದಿಂದ 2.20 ಲಕ್ಷದವರೆಗೆ ವೇತನ ನಿಗದಿಪಡಿಸಲಾಗುತ್ತದೆ.

Oil India Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಲಿಂಕ್​ ಅನ್ನು ಕ್ಲಿನ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(OIL Recruitment 2022: Apply for 55 vacancies)

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ