ONGC Recruitment 2022: ONGC ಯಲ್ಲಿ ಉದ್ಯೋಗಾವಕಾಶ: ಪದವಿ ಹೊಂದಿರುವವರು ಅರ್ಜಿ ಸಲ್ಲಿಸಿ

ONGC Recruitment 2022: ONGC ಯಲ್ಲಿ ಉದ್ಯೋಗಾವಕಾಶ: ಪದವಿ ಹೊಂದಿರುವವರು ಅರ್ಜಿ ಸಲ್ಲಿಸಿ
ONGC Recruitment 2022

ONGC Recruitment 2022: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

TV9kannada Web Team

| Edited By: Zahir PY

Mar 03, 2022 | 7:26 PM

ONGC Recruitment 2022: ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (ONGC) ಪೆಟ್ರೋ ಅಡಿಶನ್ಸ್ ಲಿಮಿಟೆಡ್ (OPAL) ನ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ONGC ಯ ಅಧಿಕೃತ ವೆಬ್‌ಸೈಟ್ ongcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಫೆಬ್ರವರಿ 24 ರಿಂದ ಪ್ರಾರಂಭವಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ONGC Recruitment 2022 ಹುದ್ದೆಗಳ ವಿವರಗಳು: ಜನರಲ್ ಮ್ಯಾನೇಜರ್ (HSE & ಫೈರ್)- 1 ಜನರಲ್ ಮ್ಯಾನೇಜರ್ (ಮಾಹಿತಿ ತಂತ್ರಜ್ಞಾನ)-1

ಎಕ್ಸಿಕ್ಯೂಟಿವ್ ಲೆವೆಲ್ ಪೋಸ್ಟ್ ಕ್ರ್ಯಾಕರ್ – 1 ಪಾಲಿಮರ್ – 1 ಆಫ್‌ಸೈಟ್ – 2 ಮೆಕ್ಯಾನಿಕಲ್ – 1 ಇನ್‌ಸ್ಟ್ರುಮೆಂಟೇಶನ್ – 02 ಎಲೆಕ್ಟ್ರಿಕಲ್ – 03 ಫೈರ್ – 1 ಎಸ್‌ಎಪಿ -1 ಮೆಟೀರಿಯಲ್ಸ್ ಮ್ಯಾನೇಜ್‌ಮೆಂಟ್ – 6 ಹಣಕಾಸು – 02 ಎಚ್‌ಆರ್- 02

ONGC Recruitment 2022 ಅರ್ಹತಾ ಮಾನದಂಡಗಳು: ಜನರಲ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಮತ್ತು ಪದವಿಯನ್ನು ಪೂರ್ಣಗೊಳಿಸಿರಬೇಕು.

ONGC Recruitment 2022 ವಯೋಮಿತಿ: ಜನರಲ್ ಮ್ಯಾನೇಜರ್ ಹುದ್ದೆಗಳಿಗೆ 21 ರಿಂದ 52 ವರ್ಷದೊಳಗಿರನವರು ಅರ್ಜಿ ಸಲ್ಲಿಸಬಹುದು. ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 18 ರಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

ONGC Recruitment 2022 ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ONGC Recruitment 2022 ಪ್ರಮುಖ ದಿನಾಂಕ: ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 18 ಮಾರ್ಚ್ 2022

ONGC Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಊ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

Follow us on

Related Stories

Most Read Stories

Click on your DTH Provider to Add TV9 Kannada