OPaL Vadodara Recruitment 2022: OPaLನ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 07, 2022 | 4:17 PM

OPaL Vadodara Recruitment 2022: ಈ ನೇಮಕಾತಿ ಕುರಿತಾದ ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮುಂತಾದ ಇತರ ಪ್ರಮುಖ ಮಾಹಿತಿಗಳು ಈ ಕೆಳಗಿನಂತಿವೆ.

OPaL Vadodara Recruitment 2022: OPaLನ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
OPaL Recruitment 2022
Follow us on

OPaL Vadodara Recruitment 2022 : ಭಾರತದ ಸಾರ್ವಜನಿಕ ವಲಯದ ಸಂಸ್ಥೆಯಾದ ವಡೋದರಾದ ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೊರೇಷನ್ ಲಿಮಿಟೆಡ್​ನ (ONGC) U & O ಕಾರ್ಯಾಚರಣೆಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 13 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳು ವಡೋದರಾ ಮತ್ತು ದಹೇಜ್ ಶಾಖೆಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮುಂತಾದ ಈ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳು: 13

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಹುದ್ದೆಗಳ ಹೆಸರು : U & O ಕಾರ್ಯಾಚರಣೆ, ತುಕ್ಕು ಮತ್ತು ತಪಾಸಣೆ, ಉಪಕರಣಗಳು, ಪವರ್ ಎಲೆಕ್ಟ್ರಾನಿಕ್ಸ್, ಸಿವಿಲ್ ಮೈಂಟೇನ್ಸ್, ಅಗ್ನಿಶಾಮಕ, ಕಾನೂನು, ಮಾಹಿತಿ ತಂತ್ರಜ್ಞಾನ, SAP, ಭದ್ರತಾ ಹುದ್ದೆಗಳು.

ವಿದ್ಯಾರ್ಹತೆಗಳು: ಹುದ್ದೆಗೆ ಅನುಗುಣವಾಗಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅಪ್ಲಿಕೇಶನ್ ವಿಧಾನ : ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 28, 2022.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ .

 

__________________________________________________________________

BIS Recruitment 2022: ಬಿಐಎಸ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

BIS Recruitment 2022: ಭಾರತ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BIS ನ ಅಧಿಕೃತ ವೆಬ್‌ಸೈಟ್‌ bis.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಪ್ರಮಾಣೀಕರಣ ವಿಭಾಗ (Standardization Department) – 4 ಹುದ್ದೆಗಳು
  • ಸಂಶೋಧನಾ ವಿಶ್ಲೇಷಣೆ – 20 ಹುದ್ದೆಗಳು
  • ನಿರ್ವಹಣಾ ವ್ಯವಸ್ಥೆ ಪ್ರಮಾಣೀಕರಣ ವಿಭಾಗ (MSCD) – 22 ಹುದ್ದೆಗಳು

ಅರ್ಹತಾ ಮಾನದಂಡಗಳು:

  • ಪ್ರಮಾಣೀಕರಣ ವಿಭಾಗ- ಬಿ.ಟೆಕ್ ಅಥವಾ ಬಿ.ಇ. ಮಾಡಿರಬೇಕು. ಅಥವಾ ಕನಿಷ್ಠ 2 ವರ್ಷಗಳ ಕೆಲಸದ ಅನುಭವದೊಂದಿಗೆ ಮೆಟಲರ್ಜಿಕಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
  • ಸಂಶೋಧನಾ ವಿಶ್ಲೇಷಣೆ- ಯಾವುದೇ ವಿಷಯದಲ್ಲಿ ಪದವಿ ಹೊಂದಿದ್ದರೆ ಅರ್ಜಿ ಸಲ್ಲಿಸಬಹುದು.
  • ನಿರ್ವಹಣಾ ವ್ಯವಸ್ಥೆ ಪ್ರಮಾಣೀಕರಣ ವಿಭಾಗ (MSCD)- ಯಾವುದೇ ವಿಭಾಗದಲ್ಲಿ ಎಂಎಸ್‌ಸಿಡಿ ಪದವಿ ಅಥವಾ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು. ಜೊತೆಗೆ ಕನಿಷ್ಠ 3 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ವಯೋಮಿತಿ: 35 ವರ್ಷದವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70 ಸಾವಿರ ರೂ. ವೇತನ ಸಿಗಲಿದೆ.

ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 15, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.