Paramilitary Jobs 2026: ದೇಶದ ಭದ್ರತಾ ಪಡೆಗಳಲ್ಲಿ 93,000 ಹುದ್ದೆಗಳಿಗೆ ಬಂಪರ್ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರ

ಭಾರತದ ಆಂತರಿಕ ಭದ್ರತಾ ಪಡೆಗಳಾದ CISF, CRPF, BSF ಸೇರಿದಂತೆ ವಿವಿಧ ವಿಭಾಗಗಳಲ್ಲಿ 93,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರವು ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿದ್ದು, RFID ತಂತ್ರಜ್ಞಾನದ ಅಳವಡಿಕೆಯ ಮೂಲಕ ಪಾರದರ್ಶಕತೆ ತಂದಿದೆ. ದೇಶಸೇವೆ ಮಾಡಲು ಬಯಸುವ ಯುವಕರಿಗೆ ಇದೊಂದು ಸುವರ್ಣಾವಕಾಶ. ಮುಂಬರುವ ಅಧಿಸೂಚನೆಗಳ ಮೇಲೆ ನಿಗಾ ಇರಿಸಿ ಪೂರ್ವ ಸಿದ್ಧತೆ ನಡೆಸುವುದು ಅಗತ್ಯ.

Paramilitary Jobs 2026: ದೇಶದ ಭದ್ರತಾ ಪಡೆಗಳಲ್ಲಿ 93,000 ಹುದ್ದೆಗಳಿಗೆ ಬಂಪರ್ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರ
ದೇಶದ ಭದ್ರತಾ ಪಡೆ

Updated on: Mar 13, 2026 | 5:17 PM

ಭಾರತದ ಆಂತರಿಕ ಭದ್ರತೆಯಲ್ಲಿ ಮಹತ್ತರ ಪಾತ್ರ ವಹಿಸುವ ವಿವಿಧ ಅರೆಸೈನಿಕ ಪಡೆಗಳಲ್ಲಿ ಪ್ರಸ್ತುತ ಬೃಹತ್ ಸಂಖ್ಯೆಯ ಹುದ್ದೆಗಳು ಖಾಲಿ ಇವೆ. ಇವು ಯುವಜನತೆಗೆ ದೊಡ್ಡ ಉದ್ಯೋಗಾವಕಾಶದ ಬಾಗಿಲನ್ನು ತೆರೆದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಸಭೆಗೆ ನೀಡಿದ ಅಧಿಕೃತ ಮಾಹಿತಿಯ ಪ್ರಕಾರ, ಸಿಐಎಸ್‌ಎಫ್, ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಐಟಿಬಿಪಿ ಸೇರಿದಂತೆ ವಿವಿಧ ಪಡೆಗಳಲ್ಲಿ ಒಟ್ಟು 93,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಬಾಕಿ ಇದೆ. ಇದರಲ್ಲಿ ವಿಶೇಷವಾಗಿ ಸಿಐಎಸ್‌ಎಫ್ (28,342) ಮತ್ತು ಸಿಆರ್‌ಪಿಎಫ್ (27,400) ಪಡೆಗಳಲ್ಲಿ ಗರಿಷ್ಠ ಸಂಖ್ಯೆಯ ಅವಕಾಶಗಳಿದ್ದು, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್‌ನಲ್ಲೂ ಸಾವಿರಾರು ಹುದ್ದೆಗಳು ಭರ್ತಿಯಾಗಬೇಕಿದೆ.

ದೇಶದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಪತ್ತು ನಿರ್ವಹಣೆಯ ಮೇಲೆ ಈ ಖಾಲಿ ಹುದ್ದೆಗಳು ಯಾವುದೇ ನಕಾರಾತ್ಮಕ ಪರಿಣಾಮ ಬೀರದಂತೆ ಲಭ್ಯವಿರುವ ಸಂಪನ್ಮೂಲಗಳನ್ನು ಸರ್ಕಾರವು ಅತ್ಯಂತ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರವು ಈಗಾಗಲೇ ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಸಿಬ್ಬಂದಿ ಆಯ್ಕೆ ಆಯೋಗ (SSC) ಮತ್ತು ಯುಪಿಎಸ್‌ಸಿ (UPSC) ಮೂಲಕ ವಾರ್ಷಿಕವಾಗಿ ನಡೆಸಲಾಗುವ ಕಾನ್‌ಸ್ಟೆಬಲ್ (GD) ಮತ್ತು ಇತರ ಅಧಿಕಾರಿ ಮಟ್ಟದ ಪರೀಕ್ಷೆಗಳನ್ನು ಚುರುಕುಗೊಳಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ತರಲು ದೈಹಿಕ ಪರೀಕ್ಷೆಗಳ ವೇಳೆ ಆರ್‌ಎಫ್‌ಐಡಿ (RFID) ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ ಹಾಗೂ ವೈದ್ಯಕೀಯ ತಪಾಸಣೆಗೆ ಬೇಕಾಗುವ ಸಮಯವನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ. ದೇಶಸೇವೆ ಮಾಡುವ ಹಂಬಲವಿರುವ ಮತ್ತು ದೈಹಿಕವಾಗಿ ಸದೃಢರಾಗಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಮುಂಬರುವ ನೇಮಕಾತಿ ಅಧಿಸೂಚನೆಗಳ ಮೇಲೆ ಕಣ್ಣಿಟ್ಟು ಪೂರ್ವ ಸಿದ್ಧತೆ ನಡೆಸುವುದು ಅತ್ಯಗತ್ಯವಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us