PDO Recruitment 2024: PDO ಹುದ್ದೆಗಳ ನೇಮಕಾತಿ, ವಯೋಮಿತಿ 3 ವರ್ಷ ಸಡಿಲಿಕೆ

ಸರ್ಕಾರಿ ಉದ್ಯೋಗ ಅನೇಕರ ಕನಸು. ಇಂತಹ ಕನಸು ಕಾಣುತ್ತಿರುವ ಪದವೀಧರರಿಗೆ ಪಿಡಿಒ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆ ದಿನ ಯಾವಾಗ? ಈ ಹುದ್ದೆಗೆ ಬೇಕಾದ ಅರ್ಹತೆಗಳೇನು? ಎನ್ನುವ ವಿವರ ಇಲ್ಲಿದೆ.

PDO Recruitment 2024: PDO ಹುದ್ದೆಗಳ ನೇಮಕಾತಿ, ವಯೋಮಿತಿ 3 ವರ್ಷ ಸಡಿಲಿಕೆ
PDO ನೇಮಕಾತಿ
Follow us
ರಮೇಶ್ ಬಿ. ಜವಳಗೇರಾ
|

Updated on: Sep 19, 2024 | 9:25 PM

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಲಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಬೆಂಗಳೂರು ಇವರು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್- ಸಿ ಹಾಗೂ ಗ್ರೂಪ್- ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾದ ಅಧಿಸೂಚನೆಗಳಿಗೆ ಹಾಗೂ ಮುಂದಿನ 1 ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ. ಇದು ಕೇವಲ ಈ ಹುದ್ದೆಗೆ ಮಾತ್ರ ಈ ಬಾರಿಗೆ ಮಾತ್ರ ಅನ್ವಯವಾಗುತ್ತದೆ.

ಇದನ್ನೂ ಓದಿ: Karnataka RDWSD Recruitment 2024: ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಹುದ್ದೆಗಳ ವಿವರ

  • ಪಿಡಿಒ ಉಳಿಕೆ ಮೂಲ ವೃಂದದ 150 ಹುದ್ದೆಗಳು
  • ಹೈದರಾಬಾದ್‌ ಕರ್ನಾಟಕ ವೃಂದದ 97 ಹುದ್ದೆಗಳು
  • ಒಟ್ಟು ಹುದ್ದೆಗಳು- 247

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು- 600 ರೂ.
  • ಇತರೆ ಹಿಂದುಳಿದ ಅಭ್ಯರ್ಥಿಗಳು- 300 ರೂ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ- 50 ರೂ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅಭ್ಯರ್ಥಿಗಳ ವಯೋಮಿತಿ

  • ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷಗಳು ಪೂರ್ಣವಾಗಿರಬೇಕು.
  • ಸಾಮಾನ್ಯ ವರ್ಗದವರಿಗೆ- 35 ವರ್ಷಗಳು ಇದ್ದಿದ್ದನ್ನ 38 ವರ್ಷಗಳು ಮಾಡಲಾಗಿದೆ.
  • 2ಎ, 2ಬಿ, 3ಎ, 3ಬಿ, 38- 38 ವರ್ಷಗಳು ಇರುವುದನ್ನ 41 ವರ್ಷಕ್ಕೆ ಏರಿಕೆ ಮಾಡಿದೆ.
  • ಎಸ್​​ಸಿ, ಎಸ್​ಟಿ, ಪ್ರವರ್ಗ1- 40 ವರ್ಷ ಇದ್ದಿದ್ದನ್ನ 43 ವರ್ಷಕ್ಕೆ ಏರಿಸಲಾಗಿದೆ.

    ಅಭ್ಯರ್ಥಿಗಳಿಗೆ ವಿಶೇಷ ಸೂಚನೆ;

  • ತಾಂತ್ರಿಕ ಕಾರಣದಿಂದ ಈ ಹಿಂದೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು.
  • ವಯೋಮಿತಿಯನ್ನು ಹೊರತು ಪಡಿಸಿ ಉಳಿದಂತೆ ಆಯೋಗದ ಈ ಮೊದಲು ಹೊರಡಿಸಿದ ಅಧಿಸೂಚನೆಯಲ್ಲಿರುವಂತೆ ಎಲ್ಲ ನಿಯಮಗಳು ಅನ್ವಯವಾಗುತ್ತವೆ.
  • ಈಗಾಗಲೇ ಅಯೋಗದ ಅಂತರ್ಜಾಲದಲ್ಲಿ ಪ್ರಕಟಣೆ ಮಾಡಿರುವಂತೆ ಪಿಡಿಒ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.

ಪಿಡಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- ಸೆಪ್ಟೆಂಬರ್ 18, 2024 ಪಿಡಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಅಕ್ಟೋಬರ್ 03, 2024

ಕೆಪಿಎಸ್‌ಸಿ ವೆಬ್​ಸೈಟ್​ https://www.kpsc.kar.nic.in/ ಭೇಟಿ ನೀಡಿ ಅಪ್ಲೇ ಮಾಡಬಹುದು.

ಇನ್ನಷ್ಟು ಉದ್ಯೋಗದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು