PFCL Recruitment 2022: ಡಿಗ್ರಿ ಮಾಡಿದವರಿಗೆ ಇಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Sep 28, 2022 | 7:45 AM

PFCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪವರ್​ ಫೈನಾನ್ಸ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ pfcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

PFCL Recruitment 2022: ಡಿಗ್ರಿ ಮಾಡಿದವರಿಗೆ ಇಲ್ಲಿದೆ ಉದ್ಯೋಗಾವಕಾಶ
jobs
Follow us on

PFCL Recruitment 2022: ಪವರ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (PFCL) ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕ, ಉಪ ಅಧಿಕಾರಿ ಮತ್ತು ಸಹಾಯಕ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪವರ್​ ಫೈನಾನ್ಸ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ pfcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿ ಅರ್ಹತೆ, ವೇತನ, ಕೊನೆಯ ದಿನಾಂಕದ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 22

ಶೈಕ್ಷಣಿಕ ಅರ್ಹತೆ:
ವಿವಿಧ ಹುದ್ದೆಗಳಿಗೆ ಪದವಿ ಅಥವಾ ಡಿಪ್ಲೊಮಾವನ್ನು ಶೈಕ್ಷಣಿಕ ಅರ್ಹತಾ ಮಾನದಂಡವಾಗಿ ನಿಗದಿಪಡಿಸಲಾಗಿದೆ. ಈ ಕುರಿತಾದ ಸಂಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವೇತನ:

  • ಸಹಾಯಕ ಅಧಿಕಾರಿ ಹುದ್ದೆಗಳಿಗೆ- 30000 ರಿಂದ 1,20,000 ರೂ.
  • ಉಪ ಅಧಿಕಾರಿ ಹುದ್ದೆಗಳಿಗೆ- 40,000 ರಿಂದ 1,40,000 ರೂ.
  • ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ- 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಆದಾಗ್ಯೂ, ಎಸ್‌ಸಿ, ಎಸ್‌ಟಿ, ದಿವ್ಯಾಂಗ ಮತ್ತು ಇಎಸ್‌ಎಂ ವರ್ಗದ ಅಭ್ಯರ್ಥಿಗಳು ಯಾವುದೇ ಶುಲ್ಕ ನೀಡಬೇಕಿಲ್ಲ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 14, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.