PFRDA Recruitment 2022: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Sep 11, 2022 | 5:11 PM

PFRDA Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PFRDA ಯ ಅಧಿಕೃತ ವೆಬ್‌ಸೈಟ್ pfrda.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

PFRDA Recruitment 2022: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ
Jobs
Follow us on

PFRDA Recruitment 2022: ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಆಫೀಸರ್ ಗ್ರೇಡ್ ಎ (ಸಹಾಯಕ ವ್ಯವಸ್ಥಾಪಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PFRDA ಯ ಅಧಿಕೃತ ವೆಬ್‌ಸೈಟ್ pfrda.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 22
  • ಫೈನಾನ್ಸ್‌ & ಅಕೌಂಟ್ಸ್‌ : 2 ಹುದ್ದೆಗಳು
  • ಮಾಹಿತಿ ತಂತ್ರಜ್ಞಾನ: 1 ಹುದ್ದೆ
  • ಸಂಶೋಧನೆ (ಅರ್ಥಶಾಸ್ತ್ರ): 1 ಹುದ್ದೆ
  • ಕಾನೂನು : 2 ಹುದ್ದೆಗಳು
  • ಅಫೀಶಿಯಲ್ ಲಾಂಗ್ವೇಜ್ : 1 ಹುದ್ದೆ

ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಇದನ್ನೂ ಓದಿ
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಿರಬಾರದರು.

ಅರ್ಜಿ ಶುಲ್ಕ:

  • ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ – ರೂ. ರೂ.1,000/ –
  • SC/ST/PWBD/ಮಹಿಳೆಯರು – ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

  • – ಹಂತ I – ಹಂತ II ರಲ್ಲಿ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿರುವ ಆನ್‌ಲೈನ್ ಸ್ಕ್ರೀನಿಂಗ್ ಪರೀಕ್ಷೆ ಇರಲಿದೆ.
  • – ಹಂತ III ರಲ್ಲಿ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿರುವ ಆನ್‌ಲೈನ್ ಪರೀಕ್ಷೆ
  • – ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಆ ಬಳಿಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಸೆಪ್ಟೆಂಬರ್ 15, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 07, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.