PGCIL Recruitment 2022: ಬೆಂಗಳೂರಿನ ಪವರ್ಗ್ರಿಡ್ ಕಾರ್ಪೊರೇಷನ್ನಲ್ಲಿದೆ ಉದ್ಯೋಗಾವಕಾಶ
PGCIL Recruitment 2022: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ powergrid.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ಗುರ್ಗಾಂವ್, ಫರಿದಾಬಾದ್, ಜಮ್ಮು, ಲಕ್ನೋ, ಪಾಟ್ನಾ, ಕೋಲ್ಕತ್ತಾ, ಶಿಲ್ಲಾಂಗ್, ಭುವನೇಶ್ವರ, ನಾಗ್ಪುರ, ವಡೋದರಾ, ಹೈದರಾಬಾದ್ ಮತ್ತು ಪಿಜಿಸಿಐಎಲ್‌ನ ಬೆಂಗಳೂರು ಘಟಕಗಳಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಇಂದಿನಿಂದ ಅಂದರೆ ಜುಲೈ 7, 2022 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ powergrid.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು: ಈ ನೇಮಕಾತಿ ಮೂಲಕ ಒಟ್ಟು 1166 ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ: ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಡಿಪ್ಲೊಮಾ ಪದವಿ ಹೊಂದಿರುವ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿವರವಾದ ಶೈಕ್ಷಣಿಕ ಅರ್ಹತೆ ನೇಮಕಾತಿ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ತಿಂಗಳ ವೇತನ:
- ಗ್ರಾಜುಯೇಟ್ ಅಪ್ರೆಂಟಿಸ್- 15000 ರೂ.
- ಎಕ್ಸಿಕ್ಯೂಟಿವ್- 15000 ರೂ,
- ಡಿಪ್ಲೋಮಾ ಅಪ್ರೆಂಟಿಸ್- 12000 ರೂ.
ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳನ್ನು ಶೈಕ್ಷಣಿಕ ಪದವಿಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 31, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.