AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela 2023: 71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ, 2023ರ ಅಂತ್ಯದೊಳಗೆ 10 ಲಕ್ಷ ಮಂದಿಗೆ ನೌಕರಿ

ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ರೋಜ್ ಗಾರ್ ಮೇಳ(ಉದ್ಯೋಗ ಮೇಳ)ದ ಗುರುವಾರ( ಏಪ್ರಿಲ್​.13) ವಿಡಿಯೋ ಕಾನ್ಫರೆನ್ಸ್ ಮೂಲಕ 71 ಸಾವಿರಕ್ಕೂ ಅಧಿಕ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.

Rozgar Mela 2023: 71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ, 2023ರ ಅಂತ್ಯದೊಳಗೆ 10 ಲಕ್ಷ ಮಂದಿಗೆ ನೌಕರಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Apr 13, 2023 | 1:32 PM

Share

ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ರೋಜ್ ಗಾರ್ ಮೇಳ(ಉದ್ಯೋಗ ಮೇಳ)ದ ಗುರುವಾರ( ಏಪ್ರಿಲ್​.13) ವಿಡಿಯೋ ಕಾನ್ಫರೆನ್ಸ್ ಮೂಲಕ 71 ಸಾವಿರಕ್ಕೂ ಅಧಿಕ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. 2023ರ ಅಂತ್ಯದೊಳಗೆ 10 ಲಕ್ಷ ಮಂದಿಗೆ ಉದ್ಯೋಗ ಒದಗಿಸುವ ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಉದ್ಯೋಗ ಸೃಷ್ಟಿಯ ಆದ್ಯತೆಯ ಮೇರೆಗೆ ತನ್ನ ಬದ್ಧತೆಯನ್ನು ಈಡೇರಿಸಲು ಈ ಅಭಿಯಾನವು ಮುಂಚೂಣಿಯದ್ದಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯೋಗ ಮತ್ತು ಯುವಜನತೆಗೆ ಉತ್ತಮ ಅವಕಾಶ ಒದಗಿಸುವಲ್ಲಿ ದೇಶದ ಬೆಳವಣಿಗೆಯಲ್ಲಿ ನೇರವಾಗಿ ಭಾಗಿಯಾಗಲು, ಯುವಶಕ್ತಿಯನ್ನು ಸಶಕ್ತೀಕರಣಗೊಳಿಸಲು ಸಹಾಯವಾಗಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಕಳೆದ ವರ್ಷವೂ ಅಕ್ಟೋಬರ್ ಹಾಗೂ ನವೆಂಬರ್​ನಲ್ಲಿ ಪ್ರಧಾನಿ ಮೋದಿ ನೇಮಕಾತಿ ಪತ್ರಗಳನ್ನು ವಿತರಿಸಿದ್ದರು.

ರೈಲ್ವೆ ಮತ್ತು ಅಂಚೆ ಇಲಾಖೆಯಲ್ಲಿ ಗರಿಷ್ಠ 50 ಸಾವಿರ ನೇಮಕಾತಿ ಪತ್ರ ವಿತರಣೆ ಈ ಉದ್ಯೋಗ ಮೇಳದಲ್ಲಿ ರೈಲ್ವೆ ಸಚಿವಾಲಯದ ಗರಿಷ್ಠ ನೇಮಕಾತಿ ಪತ್ರಗಳಿದ್ದು, 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ರೈಲ್ವೆ ಸಚಿವಾಲಯದ ಹೊರತಾಗಿ ಅಂಚೆ ಇಲಾಖೆ ಹಾಗೂ ಹಣಕಾಸು ಸೇವೆಗಳ ಇಲಾಖೆಯಲ್ಲಿ ಇರುವ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ. ಈ ವರ್ಷದ ಅಂತ್ಯದೊಳಗೆ ಒಂದು ಮಿಲಿಯನ್ ಸರ್ಕಾರಿ ಉದ್ಯೋಗಗಳನ್ನು ನೀಡುವುದಾಗಿ ಮೋದಿ ಸರ್ಕಾರ ಘೋಷಿಸಿದೆ.

ಮತ್ತಷ್ಟು ಓದಿ: Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ

ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ಕರ್ಮಯೋಗಿ ಪ್ರಮುಖ ಮೂಲಕ ತರಬೇತಿ ಪಡೆಯಲು ಅವಕಾಶ ನೀಡಲಾಗುತ್ತದೆ. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಎಲ್ಲಾ ಸಿಬ್ಬಂದಿಗೆ ಆನ್​ಲೈನ್ ಓರಿಯಂಟೇಷನ್ ಕೋರ್ಸ್​ ಆಗಿದೆ. ಕಳೆದ ವರ್ಷ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು.

ಪ್ರಧಾನಿ ಮೋದಿ ಹೇಳಿದ್ದೇನು?

ಬಂದರು ಕ್ಷೇತ್ರ ಅಭಿವೃದ್ಧಿಯಾಗುತ್ತಿದೆ. ಆರೋಗ್ಯ ಕ್ಷೇತ್ರವೂ ಉದ್ಯೋಗ ಸೃಷ್ಟಿಗೆ ಅತ್ಯುತ್ತಮ ಉದಾಹರಣೆಯಾಗುತ್ತಿದೆ. ಪ್ರತಿಯೊಂದು ಮೂಲಸೌಕರ್ಯ ಯೋಜನೆಯು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಕೃಷಿ ವಲಯದಲ್ಲಿ ಕೃಷಿ ಯಾಂತ್ರೀಕರಣವು ಹೆಚ್ಚಿದೆ, ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ನವ ಭಾರತದ ಯುವಕರು ಹೊಸ-ಯುಗದ ತಂತ್ರಜ್ಞಾನಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಡ್ರೋನ್ ತಯಾರಿಕೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ ಮತ್ತು ಡ್ರೋನ್ ಪೈಲಟ್‌ಗಳಾಗುತ್ತಿದ್ದಾರೆ. ಮೂಲಸೌಕರ್ಯ ಯೋಜನೆಗಳಲ್ಲಿನ ಬಂಡವಾಳ ಹೂಡಿಕೆಯು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುತ್ತದೆ ಮತ್ತು ಯುವ ಶಕ್ತಿಗೆ ವೈವಿಧ್ಯಮಯ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:07 am, Thu, 13 April 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು