AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ವಿಶ್ವಕರ್ಮ ಯೋಜನೆ: ಅರ್ಹತೆಗಳೇನು, ಪ್ರಯೋಜನಗಳೇನು ಗೊತ್ತಾ? ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ

PM Vishwakarma Yojana: ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ., ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಉಪಕರಣಗಳಿಗೆ ಪ್ರೋತ್ಸಾಹ, ಕ್ರೆಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ.

ಪಿಎಂ ವಿಶ್ವಕರ್ಮ ಯೋಜನೆ: ಅರ್ಹತೆಗಳೇನು, ಪ್ರಯೋಜನಗಳೇನು ಗೊತ್ತಾ? ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
ಪಿಎಂ ವಿಶ್ವಕರ್ಮ ಯೋಜನೆ: ಅರ್ಹತೆಗಳೇನು, ಪ್ರಯೋಜನಗಳೇನು ಗೊತ್ತಾ
ಸಂಜಯ್ಯಾ ಚಿಕ್ಕಮಠ
| Edited By: ಸಾಧು ಶ್ರೀನಾಥ್​|

Updated on:Oct 04, 2023 | 8:50 PM

Share

ಕಲಬುರಗಿ, ಅಕ್ಟೋಬರ್​​ 4: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು (PM Vishwakarma Yojana) ಜಾರಿಗೊಳಿಸಿದ್ದು, ವಿವಿಧ 18 ವೃತ್ತಿಗಳಲ್ಲಿ ತೊಡಗಿರುವ ಸ್ವಯಂ ಉದ್ಯೋಗಿ ಕುಶಲಕರ್ಮಿಗಳು ವಿವಿಧ ಸವಲತ್ತು ಪಡೆಯಲು ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ (kalaburagi) ಜಂಟಿ ನಿರ್ದೇಶಕ ಎಂ. ಸತೀಷಕುಮಾರ ತಿಳಿಸಿದ್ದಾರೆ.

ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ., ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಉಪಕರಣಗಳಿಗೆ ಪ್ರೋತ್ಸಾಹ, ಕ್ರೆಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ.

ಬಡಗಿತನ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ ಅಂದರೆ ಸ್ವಯಂ ಉದ್ಯೋಗಿ ಕುಶಲಕರ್ಮಿಗಳು ಹಸ್ತ ಮತ್ತು ಸಾಂಪ್ರದಾಯಿಕ ಉಪಕರಣಗಳೊಂದಿಗೆ ಕತ್ತಿ, ಗುರಾಣಿ, ಚಾಕುಗಳು ಇತ್ಯಾದಿ ಶಸ್ತ್ರಾಸ್ತ್ರ ತಯಾರಿಕೆ, ದುರಸ್ತಿ ಮತ್ತು ಸೇವೆ ಒದಗಿಸುವ ಅಸಂಘಟಿತ ವಲಯದ ಕುಶಲಕರ್ಮಿಗಳು, ಕಮ್ಮಾರ, ಸುತ್ತಿಗೆ ಮತ್ತು ಟೂಲ್‌ ಕಿಟ್ ತಯಾರಿಕೆ, ಬೀಗ ತಯಾರಕರು, ಶಿಲ್ಪಕಲೆ/ ಕಲ್ಲುಕೆತ್ತನೆ ಮಾಡುವವರು, ಆಭರಣ ತಯಾರಿಕೆ (ಅಕ್ಕಸಾಲಿಗರು), ಕುಂಬಾರಿಕೆ, ಪಾದರಕ್ಷೆ/ ಚರ್ಮಗಾರಿಕೆ ತಯಾರಿಕೆ, ಗೌಂಡಿ ಕೆಲಸಗಾರರು, ಕಸಬರಿಕೆ/ ಬಾಸ್ಕೆಟ್ / ಮ್ಯಾಟ್ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ತಯಾರಕರು, ಗೊಂಬೆ ತಯಾರಕರು, ಕ್ಷೌರಿಕ, ಹೂ ಮಾಲೆ ತಯಾರಕರು, ಧೋಬಿ, ಟೈಲರ್, ಮೀನಿನ ಬಲೆಗಳನ್ನು ತಯಾರಿಸುವಂತಹ ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ.

PM Vishwakarma Yojana : ನೊಂದಣಿಗೆ ಅರ್ಹತೆಗಳೇನು?

18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು. ಒಂದು ಕುಟುಂಬದಲ್ಲಿ (ಗಂಡ, ಹೆಂಡತಿ ಮತ್ತು ಮದುವೆಯಾಗದ ಮಕ್ಕಳು) ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರು. ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು, ಕಳೆದ 5 ವರ್ಷಗಳಲ್ಲಿ ಪಿಎಂ ಇಜಿಪಿ/ಮುದ್ರಾ ಮತ್ತು ಪಿಎಂ-ಸ್ವನಿಧಿ ಸಾಲಗಳನ್ನು ಪಡೆದಿರಬಾರದು. ಮುದ್ರಾ ಮತ್ತು ಪಿಎಂ-ಸ್ವನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ ಕುಶಲಕರ್ಮಿಗಳು ಯೋಜನೆಯ‌ ಲಾಭ ಪಡೆಯಲು ಅರ್ಹರಾಗಿರುತ್ತಾರೆ.

PM Vishwakarma Yojana : ಯೋಜನೆಯಿಂದ ಸಿಗುವ ಪ್ರಯೋಜನಗಳು

ಯೋಜನೆಯಡಿ ನೋಂದಣಿಯಾದ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ಕಾಲ ತರಬೇತಿಯನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ಸ್ಟೆಫಂಡ್ ಮತ್ತು ಇತರೆ ಭತ್ಯೆ ನೀಡಲಾಗುತ್ತದೆ. ತರಬೇತಿ ನಂತರ ಪ್ರಮಾಣ ಪತ್ರದೊಂದಿಗೆ 15,000 ರೂ. ಬೆಲೆಬಾಳುವ ಉಪಕರಣ ನೀಡಲಾಗುತ್ತದೆ.

Also Read: ದಿನಕ್ಕೆ 1 ಗಂಟೆ ಮಾತ್ರ ಕೆಲಸ ಮಾಡ್ತೇನೆ, 1.2 ಕೋಟಿ ರೂಪಾಯಿ ವಾರ್ಷಿಕ ವೇತನ ಗಳಿಸುತ್ತೇನೆ ಎಂದ 20 ವರ್ಷದ ಗೂಗಲ್ ಟೆಕ್ಕಿ!

ಇದಲ್ಲದೆ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಶೇ. 5 ಬಡ್ಡಿ ದರದಲ್ಲಿ 1 ಲಕ್ಷ ರೂ. ಸಾಲ ನೀಡಲಾಗುವುದು. ತದನಂತರ 15 ದಿನಗಳ ವರೆಗೆ ಉನ್ನತ ಮಟ್ಟದ ತರಬೇತಿ ನೀಡಿ ಮೊದಲು ಪಡೆದ 1 ಲಕ್ಷ ರೂ. ಸಾಲ ಮರುಪಾವತಿಯಾದ ನಂತರ ಶೇ. 5ರ‌ ಬಡ್ಡಿ ದರದಲ್ಲಿಯೇ 2 ಲಕ್ಷ ರೂ. ಸಾಲ ನೀಡುವುದರ ಜೊತೆಗೆ ಕುಶಲಕರ್ಮಿಗಳಿಂದ ತಯಾರಿಸಲ್ಪಡುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಸಹ ಕಲ್ಪಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಸಂಪರ್ಕಿಸಬೇಕೆಂದು ಅವರು ಕೋರಿದ್ದಾರೆ.

ಉದ್ಯೋಗಕ್ಕೆ ಸಂಬಂಧಪಟ್ಟ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Wed, 4 October 23

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?