PNB Recruitment 2022: ಪಂಜಾಬ್ ಬ್ಯಾಂಕ್​ನ ಸುರಕ್ಷತಾ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Aug 07, 2022 | 8:00 AM

PNB Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್‌ pnbindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

PNB Recruitment 2022: ಪಂಜಾಬ್ ಬ್ಯಾಂಕ್​ನ ಸುರಕ್ಷತಾ ಹುದ್ದೆಗಳಿಗೆ ಅರ್ಜಿ ಆಹ್ವಾನ
PNB Recruitment 2022
Follow us on

PNB Recruitment 2022: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಫೈರ್ ಸೇಫ್ಟಿ ಮತ್ತು ಸೆಕ್ಯುರಿಟಿ ಇಲಾಖೆಗಳ ಅಡಿಯಲ್ಲಿ ಆಫೀಸರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್‌ pnbindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 103
  • ಆಫೀಸರ್​ (ಅಗ್ನಿಶಾಮಕ ಸುರಕ್ಷತೆ): 23 ಹುದ್ದೆಗಳು
  • ಮ್ಯಾನೇಜರ್ (ಸುರಕ್ಷತೆ): 80 ಹುದ್ದೆಗಳು

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ವಿದ್ಯಾರ್ಹತೆಗಳನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಅಭ್ಯರ್ಥಿಗಳ ವಯೋಮಿತಿ 21 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- ರೂ.1003/-
  • SC/ST/PWBD ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- ರೂ.59/-

ಆಯ್ಕೆ ಪ್ರಕ್ರಿಯೆ:
ಸಂದರ್ಶನ, ಲಿಖಿತ / ಆನ್‌ಲೈನ್ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು ತಲಾ 2 ಅಂಕಗಳ 50 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಅವಧಿ 60 ನಿಮಿಷಗಳು ಮತ್ತು ಗರಿಷ್ಠ ಅಂಕಗಳು 100.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 30, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.