PNB Recruitment: ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ – 10ನೇ ತರಗತಿ ಪಾಸಾದವರಿಗೆ 21 ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ ಜವಾನ (Peon) ಉದ್ಯೋಗ ಲಭ್ಯವಿದ್ದು (Recruitments), ಈಗಾಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಖುದ್ದಾಗಿ ಅಥವಾ ಸ್ಪೀಡ್​ ಪೋಸ್ಟ್​ ಮೂಲಕ ಬೆಂಗಳೂರಿನಲ್ಲಿರುವ ಪಂಜಾಬ್​ ನ್ಯಾಷನಲ್​ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಮಾರ್ಚ್​ 3, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಈ ಉದ್ಯೋಗ ನೀಡಲಾಗುತ್ತದೆ.

PNB Recruitment: ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ - 10ನೇ ತರಗತಿ ಪಾಸಾದವರಿಗೆ 21 ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ - 10ನೇ ತರಗತಿ ಪಾಸಾದವರಿಗೆ 21 ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 18, 2022 | 9:27 AM

ಬೆಂಗಳೂರು: ಸಾರ್ವಜನಿಕ ಕ್ಷೇತ್ರದಲ್ಲಿ ಮೂರನೆಯ ಸ್ಥಾನದಲ್ಲಿರುವ ಪಂಜಾಬ್​ ನ್ಯಾಷನಲ್​ ಬ್ಯಾಂಕ್ 1969ರಿಂದ ರಾಷ್ಟ್ರೀಕೃತ ಬ್ಯಾಂಕ್ ಆಗಿ ಭಾರತದ ಮೂಲೆ ಮೂಲೆಯಲ್ಲಿಯೂ ತನ್ನ ಶಾಖೆಗಳನ್ನು ತೆರೆದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) ಸುಮಾರು 5 ಸಾವಿರ ಶಾಖೆಗಳನ್ನು ಹೊಂದಿದೆ. ಪಂ ಜಾಬ್​ ನ್ಯಾಷನಲ್​ ಬ್ಯಾಂಕ್ ಇದೀಗ ಜವಾನರ ಹುದ್ದೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. SSLC ಪಾಸಾದವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ ಜವಾನ (Peon) ಉದ್ಯೋಗ ಲಭ್ಯವಿದ್ದು (Recruitments), ಈಗಾಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಖುದ್ದಾಗಿ ಅಥವಾ ಸ್ಪೀಡ್​ ಪೋಸ್ಟ್​ ಮೂಲಕ ಬೆಂಗಳೂರಿನಲ್ಲಿರುವ ಪಂಜಾಬ್​ ನ್ಯಾಷನಲ್​ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಮಾರ್ಚ್​ 3, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಈ ಉದ್ಯೋಗ ನೀಡಲಾಗುತ್ತದೆ.

ಬ್ಯಾಂಕಿಂಗ್ ಉದ್ಯೋಗ (Job) ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಟ್ಟು 21 ಜವಾನ (Peon) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾದವರು ಇಂದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/2/2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022

ವಿದ್ಯಾರ್ಹತೆ: ಪಂಜಾಬ್​ ನ್ಯಾಷನಲ್ ಬ್ಯಾಂಕ್​ನ ಜವಾನ (Peon) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಶೇ. 40 ಅಂಕ ಪಡೆದು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಪಂಜಾಬ್​ ನ್ಯಾಷನಲ್ ಬ್ಯಾಂಕ್​ನ ಜವಾನ (Peon) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-24 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ: ಪಂಜಾಬ್​ ನ್ಯಾಷನಲ್ ಬ್ಯಾಂಕ್​ನಲ್ಲಿ ಜವಾನ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ: ಪಂಜಾಬ್​ ನ್ಯಾಷನಲ್ ಬ್ಯಾಂಕ್​ನಲ್ಲಿ ಜವಾನ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಏನೆಲ್ಲಾ ದಾಖಲೆಗಳು ಸಲ್ಲಿಸಬೇಕು: ಸ್ವಯಂ ವಿವರ ಅರ್ಜಿಯ ಜೊತೆಗೆ ಇತ್ತೀಚಿನ ಭಾವಚಿತ್ರ, ವಯಸ್ಸಿಗೆ ಪೂರಕವಾದ ದಾಖಲೆ, ಮಾರ್ಕ್ಸ್​​ ಕಾರ್ಡ್​​, ಖಾಯಂ ನಿವಾಸ ವಿಳಾಸ ಪುರಾವೆ ಮುಂತಾದ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ: ಪಂಜಾಬ್​ ನ್ಯಾಷನಲ್ ಬ್ಯಾಂಕ್​, ವೃತ್ತ ಕಚೇರಿ, ಹೆಚ್​​​ ಆರ್ ವಿಭಾಗ, ​ಬೆಂಗಳೂರು ಪೂರ್ವ, ರಹೇಜಾ ಟವರ್ಸ್​, ಎಂಜಿ ರಸ್ತೆ, ಬೆಂಗಳೂರು – 560001

ಇದನ್ನೂ ಓದಿ: ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮ ನಿರ್ವಹಿಸಲು ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ, ನೇರ ಸಂದರ್ಶನ

ಇದನ್ನೂ ಓದಿ: Indian Navy Recruitment 2022: 10ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ: ವೇತನ 63 ಸಾವಿರ ರೂ.

Published On - 7:09 am, Fri, 18 February 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್