Police Constable Recruitment 2022: ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ತೃತೀಯ ಲಿಂಗಿಗಳಿಗೂ ಅವಕಾಶ

ಪಿಯುಸಿ ಮುಗಿದು ಸರ್ಕಾರಿ ಹುದ್ದೆಗಳಿಗಾಗಿ ಹುಡುಕುತ್ತಾ ಇದ್ದೀರಾ? ಹಾಗಿದ್ದರೆ ನಿಮಗೆ ಇಲ್ಲಿದೆ ನೋಡಿ ಸುವರ್ಣಾವಕಾಶ. ಇಂದೇ ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Police Constable Recruitment 2022: ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ತೃತೀಯ ಲಿಂಗಿಗಳಿಗೂ ಅವಕಾಶ
Karnataka Police Constable Recruitment
Follow us
TV9 Web
| Updated By: Digi Tech Desk

Updated on:Oct 21, 2022 | 11:18 AM

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1591 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷ ಮತ್ತು ಮಹಿಳೆಯರಿಗೂ ಸೇರಿದಂತೆ ತೃತೀಯ ಲಿಂಗಿಗಳಿಗೂ ಅವಕಾಶ ಕಲ್ಪಿಸಕಾಗಿದೆ. ಒಟ್ಟು 1137 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕಲ್ಯಾಣ ಕರ್ನಾಟಕ ಪೊಲೀಸ್​ ಕಾನ್ಸ್​ಟೇಬಲ್​ ವಿಭಾಗದಲ್ಲೂ ಪುರುಷ ಮತ್ತು ಮಹಿಳೆಯರಿಗೂ ಸೇರಿದಂತೆ ತೃತೀಯ ಲಿಂಗಿಗಳಿಗೂ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 454 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಹುದ್ದೆಗಳಲ್ಲಿ 2 ಭಾಗಗಳಿವೆ. 1137 ಕರ್ನಾಟಕ ಸಾಮಾನ್ಯ ವೃಂದ ಮತ್ತು 454 ಕಲ್ಯಾಣ ಕರ್ನಾಟಕ ವೃಂದ. ಒಟ್ಟು 1591 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು: ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 20.10.2022 ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21.11.2022

ಅರ್ಜಿದಾರರ ವಯೋಮಿತಿ ವಿವರ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಗರಿಷ್ಠ 25 ವರ್ಷ. ಎಸ್ ಸಿ, ಎಸ್ ಟಿ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ. ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಒಬಿಸಿ, ಸಾಮಾನ್ಯ ಅಭ್ಯರ್ಥಿಗಳಿಗೆ 400 ರೂ. ಎಸ್ ಸಿ, ಎಸ್ ಟಿ, ಒಬಿಸಿ ಅಭ್ಯರ್ಥಿಗಳಿಗೆ 200 ರೂ. ಆನ್ ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 23.11.2022

ಶೈಕ್ಷಣಿಕ ಆರ್ಹತೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ಪಿಯುಸಿ ಅಥವಾ ತತ್ಸಮಾನವಾದ ಕೋರ್ಸ್ ಪೂರ್ಣಗೊಳಿಸಿರಬೇಕು.

ಪೊಲೀಸ್ ಕಾನ್ಸ್ಟೇಬಲ್ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ? ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಪೊಲೀಸ್ ಕಾನ್ಸ್ಟೇಬಲ್​ ವೇತನ ಶ್ರೇಣಿ: ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಆಯ್ಕೆಯಾದ ಅಭ್ಯರ್ಥಿಗೆ 23,500 ರಿಂದ 47,650 ರೂ.

ಅರ್ಜಿ ಸಲ್ಲಿಸಲು ಲಿಂಕ್: ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ವೆಬ್​ಸೈಟ್​ https://ksp-recruitment.in/ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.

– ಆನಂದ ಜೇವೂರ್, ಕಲಬುರಗಿ

Published On - 11:16 am, Fri, 21 October 22

ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ