Post Office Recruitment: 8ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 63 ಸಾವಿರ ರೂ.

Post Office Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Post Office Recruitment: 8ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 63 ಸಾವಿರ ರೂ.
Post Office Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 11, 2022 | 7:45 AM

Post Office Recruitment 2022: ಅಂಚೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಏಕೆಂದರೆ ಪೋಸ್ಟ್ ಆಫೀಸ್‌ನಲ್ಲಿನ ಟ್ರೇಡರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಖ್ಯೆ ಮತ್ತು ವಿವರಗಳು: ಈ ನೇಮಕಾತಿ ಮೂಲಕ ಒಟ್ಟು 7 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆ ಹುದ್ದೆಗಳೆಂದರೆ…

  • ಎಲೆಕ್ಟ್ರಿಷಿಯನ್-1
  • ಕಾರ್ಪೆಂಟರ್- 1
  • ಎಂಪಿ ಮೆಕಾನಿಕ್- 2
  • ಟೈಯರ್ಸ್​ಮನ್- 1
  • ವೆಲ್ಡರ್- 1
  • ಪೇಂಟರ್- 1

ವಿದ್ಯಾರ್ಹತೆ: ಈ ಹುದ್ದೆಗಳಿಗೆ 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ನೀವು ಐಟಿಐ ಪ್ರಮಾಣಪತ್ರ ಹೊಂದಿರಬೇಕು. ಹಾಗೆಯೇ ನೀವು ಅರ್ಜಿ ಸಲ್ಲಿಸುವ ವಿಭಾಗದಲ್ಲಿ ಕನಿಷ್ಠ ಒಂದು ವರ್ಷದ ಅನುಭವವನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇನ್ನು ಎಂಪಿ ಮೆಕಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದರೆ, ಹೆವಿ ಮೋಟಾರು ವಾಹನ ಚಾಲನಾ ಪರವಾನಗಿಯನ್ನು ಹೊಂದಿರುವುದು ಅವಶ್ಯಕ.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ 30 ವರ್ಷಗಳ ಒಳಗಿರಬೇಕು. ಅಂದರೆ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಸರ್ಕಾರಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗದವರಿಗೆ ಗರಿಷ್ಠ ವಯೋಮಿತಿಯಲ್ಲಿ ಸ್ವಲ್ಪ ಸಡಿಲಿಕೆ ಇರುತ್ತದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ವೇತನ ಶ್ರೇಣಿಯ ಆಧಾರದ ಮೇಲೆ ವೇತನ ನೀಡಲಾಗುತ್ತದೆ. ಅದರಂತೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 19,900 ರೂ. ನಿಂದ 63,200 ರೂ.ವರೆಗೆ ವೇತನ ಸಿಗಲಿದೆ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 27, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್​ಲೋಡ್ ಮಾಡಬಹುದು. ಹೀಗೆ ಡೌನ್​ಲೋಡ್ ಮಾಡಿದ ಅರ್ಜಿಯನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ: The Manager, Mail Motor Service, Goods Shed Road, Coimbatore- 641001, Tamilnadu

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ