ಲೋಕಸಭೆ ಚುನಾವಣೆ: PSI 402 ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ

| Updated By: Rakesh Nayak Manchi

Updated on: Mar 21, 2024 | 2:15 PM

ಲೋಕಸಭೆ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8 ರಂದು ನಿಗದಿಯಾಗಿದ್ದ ಪಿಎಸ್​ಐ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆ: PSI 402 ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಸಭೆ ಚುನಾವಣೆ ಹಿನ್ನೆಲೆ PSI 402 ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು, ಮಾ.21: ಲೋಕಸಭೆ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8 ರಂದು ನಿಗದಿಯಾಗಿದ್ದ ಪಿಎಸ್​ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಲ್ಲದೆ, ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

2021ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಹುದ್ದೆಗಳು ಇವಾಗಿದ್ದು, ಮೇ 8 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಈ ವೇಳಾಪಟ್ಟಿಗೆ ಯಾವುದೇ ಆಕ್ಷೇಪಣೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಿದ್ದಲ್ಲಿ ಇದೇ ದಿನಾಂಕದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: RPF Recruitment 2024: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಸಾವಿರಾರು SI ಮತ್ತು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ

ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಒಟ್ಟು ಎರಡು ರೀತಿಯ ಪ್ರಶ್ನೆ ಪತ್ರಿಕೆಗಳು ಇರಲಿವೆ. ಮೊದಲ ಪತ್ರಿಕೆ ಪ್ರಬಂಧ, ಸಾರಂಶ, ಭಾಷಾಂತರ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎರಡನೇ ಪತ್ರಿಕೆಯು ವಸ್ತುನಿಷ್ಟ ಮಾದರಿಯದಾಗಿದ್ದು, ಬಹುವಿಧ ಆಯ್ಕೆ ಉತ್ತರಗಳ ಲಿಖಿತ ಪರೀಕ್ಷೆ ಇರುತ್ತದೆ. ಎರಡೂ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಇರಲಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ