Power Grid Recruitment: ಪವರ್ ಗ್ರಿಡ್ ಕಾರ್ಪೊರೇಷನ್ ನೇಮಕಾತಿ: ತಿಂಗಳ ವೇತನ 1.20 ಲಕ್ಷ ರೂ.

| Updated By: ಝಾಹಿರ್ ಯೂಸುಫ್

Updated on: May 18, 2022 | 9:00 AM

Power Grid Recruitment: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಸಂಬಂಧಿತ ವಿಷಯಗಳಲ್ಲಿ ಬಿಇ / ಬಿಟೆಕ್ / ಬಿಎಸ್ಸಿ (ಎಂಜಿನಿಯರಿಂಗ್) ಮಾಡಿರಬೇಕು.

Power Grid Recruitment: ಪವರ್ ಗ್ರಿಡ್ ಕಾರ್ಪೊರೇಷನ್ ನೇಮಕಾತಿ: ತಿಂಗಳ ವೇತನ 1.20 ಲಕ್ಷ ರೂ.
Power Grid Recruitment
Follow us on

Power Grid Recruitment:ಭಾರತದ ಸಾರ್ವಜನಿಕ ವಲಯದ ಉದ್ಯಮವಾದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​ ಹಲವು ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನವದೆಹಲಿ ಮೂಲದ ಕಂಪನಿಯು ಈಶಾನ್ಯ ಪ್ರದೇಶ ಪ್ರಸರಣ ವ್ಯವಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದೆ. ಈ ನೇಮಕಾತಿ ಅಡಿಯಲ್ಲಿ ಯಾವ ವಿಭಾಗಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ.? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ…

* ಅಧಿಸೂಚನೆಯಲ್ಲಿ ತಿಳಿಸಿರುವಂತೆ ಒಟ್ಟು 75 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

* ಇವುಗಳಲ್ಲಿ ಫೀಲ್ಡ್ ಎಂಜಿನಿಯರ್‌ಗಳು (35) ಮತ್ತು ಫೀಲ್ಡ್ ಸೂಪರ್‌ವೈಸರ್‌ಗಳು (40) ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಎಲೆಕ್ಟ್ರಿಕಲ್ ಮತ್ತು ಸಿವಿಲ್ ಇಲಾಖೆಗಳ ಅಡಿಯಲ್ಲಿ ಬರಲಿವೆ.

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

* ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಸಂಬಂಧಿತ ವಿಷಯಗಳಲ್ಲಿ ಬಿಇ / ಬಿಟೆಕ್ / ಬಿಎಸ್ಸಿ (ಎಂಜಿನಿಯರಿಂಗ್) ಮಾಡಿರಬೇಕು. ಹಾಗೆಯೇ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 29 ವರ್ಷ ಮೀರಬಾರದು.

ಪ್ರಮುಖ ವಿಷಯಗಳು..

* ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

* ಸ್ಕ್ರೀನಿಂಗ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಅಂತಿಮ ಆಯ್ಕೆಯು ವೈಯಕ್ತಿಕ ಸಂದರ್ಶನವನ್ನು ಆಧರಿಸಿರುತ್ತದೆ.

* ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23 ಸಾವಿರದಿಂದ 1.20 ಲಕ್ಷ ರೂ. ವರೆಗೆ ವೇತನ ಸಿಗಲಿದೆ.

* ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ಜೂನ್ 01, 2022.

* ಈ ನೇಮಕಾತಿ ಕುರಿತಾದ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.