POWERGRID Recruitment 2022: ಪವರ್ಗ್ರೀಡ್ ನೇಮಕಾತಿ: ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ
POWERGRID Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪವರ್ಗ್ರೀಡ್ನ ಅಧಿಕೃತ ವೆಬ್‌ಸೈಟ್ powergrid.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಭರ್ತಿ ಪ್ರಕ್ರಿಯೆ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
POWERGRID Recruitment 2022: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ (POWERGRID) ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ POWERGRID ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪವರ್ಗ್ರೀಡ್ನ ಅಧಿಕೃತ ವೆಬ್‌ಸೈಟ್ powergrid.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಭರ್ತಿ ಪ್ರಕ್ರಿಯೆ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಡೆಪ್ಯುಟಿ ಮ್ಯಾನೇಜರ್: 17 ಹುದ್ದೆಗಳು ಸಹಾಯಕ ಮ್ಯಾನೇಜರ್: 15 ಹುದ್ದೆಗಳು
ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಅರ್ಜಿಗಳ ಪರಿಶೀಲಿಸಿ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು: ಈ ಹುದ್ದೆಗಳಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 19, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
__________________________________________________________________________
Railway Recruitment 2022: ಈಶಾನ್ಯ ರೈಲ್ವೆ ನೇಮಕಾತಿ: ಇಂಜಿನಿಯರ್ ಪದವೀಧರರಿಗೆ ಅವಕಾಶ
Railway Recruitment 2022: ಈಶಾನ್ಯ ರೈಲ್ವೆ ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ner.indianrailways.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು 22 ಜೂನ್ 2022 ರಂದು ಪ್ರಾರಂಭವಾಗಿದ್ದು, 5 ಜುಲೈ 2022 ರವರೆಗೆ ಅರ್ಜಿ ಹಾಕಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಶೈಕ್ಷಣಿಕ ಅರ್ಹತೆ: ವಿವಿಧ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಮತ್ತು ವಿವಿಧ ವಿಭಾಗಗಳಲ್ಲಿ ಡಿಪ್ಲೊಮಾ ಪದವಿಯನ್ನು ಕಡ್ಡಾಯ ಶೈಕ್ಷಣಿಕ ಅರ್ಹತೆಯಾಗಿ ನಿಗದಿ ಮಾಡಲಾಗಿದೆ. ಈ ಕುರಿತು ಇನ್ನಷ್ಟು ಮಾಹಿತಿಗಾಗಿ ಅಧಿಸೂಚನೆಯಲ್ಲಿರುವ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ.
ಆಯ್ಕೆ ಪ್ರಕ್ರಿಯೆ: ಗೇಟ್ ಸ್ಕೋರ್ ಕಾರ್ಡ್, ಅನುಭವ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಮೇಲಿನ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಗೇಟ್ ಅಂಕಪಟ್ಟಿಗೆ 55 ಮಾರ್ಕ್ಸ್, ಅನುಭವಕ್ಕೆ 30 ಮಾರ್ಕ್ಸ್ ಮತ್ತು ಸಂದರ್ಶನಕ್ಕೆ 15 ಮಾರ್ಕ್ಸ್ ನಿಗದಿಪಡಿಸಲಾಗಿದೆ. ಅದರಂತೆ ಆಯಾ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ಪರಿಶೀಲಿಸಿ ಅದಕ್ಕೆ ತಕ್ಕಂತೆ ಮಾರ್ಕ್ಸ್ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ₹ 500 ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 5, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 6:11 pm, Mon, 27 June 22