AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Internship Scheme: ಪಿಎಂ ಇಂಟರ್ನ್‌ಶಿಪ್ ಯೋಜನೆ ಆರಂಭ; ಯುವಜನತೆಗೆ ಉದ್ಯೋಗದ ತರಬೇತಿ ಜೊತೆಗೆ 9,000ರೂ. ಸ್ಟೈಫಂಡ್

2026ರ ಭಾರತ ಸರ್ಕಾರದ ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ ಯುವಕರಿಗೆ ಕಾರ್ಪೊರೇಟ್ ಅನುಭವ ನೀಡಲಿದೆ. 12 ತಿಂಗಳ ಈ ತರಬೇತಿಯಲ್ಲಿ ಮಾಸಿಕ 9,000ರೂ. ಸ್ಟೈಫಂಡ್ ಜೊತೆ ಕೌಶಲ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. 21ರಿಂದ 24 ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವೀಧರರು pminternship.mca.gov.in ಮೂಲಕ ಮೇ 13ರೊಳಗೆ ಅರ್ಜಿ ಸಲ್ಲಿಸಬಹುದು. ಉಜ್ವಲ ಭವಿಷ್ಯಕ್ಕೆ ಇದೊಂದು ಉತ್ತಮ ಅವಕಾಶ.

PM Internship Scheme: ಪಿಎಂ ಇಂಟರ್ನ್‌ಶಿಪ್ ಯೋಜನೆ ಆರಂಭ; ಯುವಜನತೆಗೆ ಉದ್ಯೋಗದ ತರಬೇತಿ ಜೊತೆಗೆ 9,000ರೂ. ಸ್ಟೈಫಂಡ್
ಪಿಎಂ ಇಂಟರ್ನ್‌ಶಿಪ್ ಯೋಜನೆImage Credit source: Ai generated
ಅಕ್ಷತಾ ವರ್ಕಾಡಿ
|

Updated on:May 14, 2026 | 3:33 PM

Share

ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ ಅಡಿಯಲ್ಲಿ ದೇಶದ ಯುವಕ-ಯುವತಿಯರಿಗೆ ಕಾರ್ಪೊರೇಟ್ ವಲಯದಲ್ಲಿ ಕೆಲಸ ಮಾಡುವ ಸುವರ್ಣ ಅವಕಾಶ ಲಭ್ಯವಾಗಿದೆ. ಈ ಯೋಜನೆಯ ಪ್ರಮುಖ ಉದ್ದೇಶ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ ಅಭಿವೃದ್ಧಿ ತರಬೇತಿಯನ್ನು ನೀಡುವುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 9,000ರೂ. ಸ್ಟೈಫಂಡ್ ನೀಡಲಾಗುತ್ತದೆ. ಇದು ಒಟ್ಟು 12 ತಿಂಗಳ ಅವಧಿಯ ಇಂಟರ್ನ್‌ಶಿಪ್ ಆಗಿದ್ದು, ತರಬೇತಿ ಪಡೆಯುವವರು ದೇಶದ ಅಗ್ರಗಣ್ಯ 500 ಕಂಪನಿಗಳಲ್ಲಿ ಅನುಭವ ಪಡೆಯಲು ಅವಕಾಶವಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 21 ರಿಂದ 24 ವರ್ಷ ವಯೋಮಿತಿಯವರಾಗಿರಬೇಕು. ಶೈಕ್ಷಣಿಕವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಅಥವಾ ಯಾವುದೇ ಪದವಿಯನ್ನು ಪೂರ್ಣಗೊಳಿಸಿದವರು ಅರ್ಹರಾಗಿರುತ್ತಾರೆ. ಆದರೆ, ಐಐಟಿ, ಐಐಎಂ ಅಥವಾ ಸಿಎ ಅಂತಹ ಉನ್ನತ ಪದವಿ ಹೊಂದಿದವರಿಗೆ ಮತ್ತು ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಹೆಚ್ಚಿರುವವರಿಗೆ ಇದರಲ್ಲಿ ಅವಕಾಶವಿರುವುದಿಲ್ಲ. ಅಭ್ಯರ್ಥಿಗಳ ಕುಟುಂಬದಲ್ಲಿ ಯಾರಾದರೂ ಸರ್ಕಾರಿ ಉದ್ಯೋಗದಲ್ಲಿದ್ದರೂ ಸಹ ಅವರು ಈ ಯೋಜನೆಗೆ ಅರ್ಹರಲ್ಲ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಅರ್ಜಿ ಸಲ್ಲಿಸುವ ವಿಧಾನ ಮತ್ತು ಆಯ್ಕೆ ಪ್ರಕ್ರಿಯೆ:

ಆಸಕ್ತರು ಅಧಿಕೃತ ವೆಬ್‌ಸೈಟ್ pminternship.mca.gov.in ಮೂಲಕ ಉಚಿತವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಮೇ 13ರೊಳಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ನೋಂದಣಿ ಸಮಯದಲ್ಲಿ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ವಿವರಗಳನ್ನು ನೀಡಿ, ತಮಗೆ ಇಷ್ಟವಾದ ಕ್ಷೇತ್ರ ಮತ್ತು ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಶೈಕ್ಷಣಿಕ ಮೆರಿಟ್ ಮತ್ತು ಕಂಪನಿಗಳ ಅವಶ್ಯಕತೆಗಳನ್ನು ಆಧರಿಸಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ತರಬೇತಿಯ ಕೊನೆಯಲ್ಲಿ ನೀಡಲಾಗುವ ಅನುಭವದ ಪ್ರಮಾಣಪತ್ರವು ಅಭ್ಯರ್ಥಿಗಳು ಭವಿಷ್ಯದಲ್ಲಿ ಖಾಸಗಿ ವಲಯದಲ್ಲಿ ಉತ್ತಮ ಉದ್ಯೋಗಗಳನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:13 pm, Sat, 9 May 26

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ