Prasar Bharati Recruitment 2025: ಪ್ರಸಾರ ಭಾರತಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸುವುದು ಹೇಗೆ?

ಪ್ರಸಾರ ಭಾರತಿಯು ದೇಶಾದ್ಯಂತ 421 ತಾಂತ್ರಿಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇವು ತಾತ್ಕಾಲಿಕ ಹುದ್ದೆಗಳಾಗಿದ್ದು, ಎಂಜಿನಿಯರಿಂಗ್ ಪದವೀಧರರಿಗೆ ಆದ್ಯತೆ ನೀಡಲಾಗುವುದು. ಜುಲೈ 1, 2025 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ತಿಂಗಳಿಗೆ 25,000 ರೂ. ಸ್ಟೈಫಂಡ್ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ.

Prasar Bharati Recruitment 2025: ಪ್ರಸಾರ ಭಾರತಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸುವುದು ಹೇಗೆ?
Prasar Bharati Recruitment (1)

Updated on: Jun 19, 2025 | 11:52 AM

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿ, ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಆದಾಗ್ಯೂ, ಈ ಎಲ್ಲಾ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ಮಾತ್ರ ಭರ್ತಿ ಮಾಡಲಾಗುತ್ತದೆ. ದೇಶಾದ್ಯಂತ ಆರು ವಲಯಗಳಲ್ಲಿ ಅಂದರೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ, ನವದೆಹಲಿ ಮತ್ತು ಈಶಾನ್ಯ ವಲಯಗಳಲ್ಲಿ ಖಾಲಿ ಇರುವ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 421 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 1 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಇತರ ವಿವರಗಳನ್ನು ಕೆಳಗೆ ಪರಿಶೀಲಿಸಿ.

ಹುದ್ದೆಗಳ ವಿವರಗಳು:

  • ದಕ್ಷಿಣ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 63
  • ಪೂರ್ವ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 65
  • ಪಶ್ಚಿಮ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 66
  • ಈಶಾನ್ಯ ವಲಯದಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 126
  • ನವದೆಹಲಿಯಲ್ಲಿ ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳ ಸಂಖ್ಯೆ: 101

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ಎಲೆಕ್ಟ್ರಿಕಲ್, ಸಿವಿಲ್, ಐಟಿ ಅಥವಾ ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ಕನಿಷ್ಠ ಶೇ. 65 ರಷ್ಟು ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು. 2024-25 ರ ಫ್ರೆಶರ್ಸ್ ಪದವೀಧರರು ಸಹ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯಸ್ಸಿನ ಮಿತಿ 30 ವರ್ಷ.

ಇದನ್ನೂ ಓದಿ: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನಲ್ಲಿ 250 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ, ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ಆಸಕ್ತ ಅಭ್ಯರ್ಥಿಗಳು ಜುಲೈ 1, 2025 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಜೂನ್ 16 ರಿಂದ ಅರ್ಜಿಗಳು ಪ್ರಾರಂಭವಾಗಿವೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮವು ಒಂದು ವರ್ಷದ ಅವಧಿಯದ್ದಾಗಿರುತ್ತದೆ. ಈ ಅವಧಿಯಲ್ಲಿ, ತಿಂಗಳಿಗೆ ರೂ. 25,000 ಸ್ಟೈಫಂಡ್ ನೀಡಲಾಗುತ್ತದೆ. ಇತರ ವಿವರಗಳನ್ನು ಕೆಳಗಿನ ಅಧಿಸೂಚನೆಯಲ್ಲಿ ಪರಿಶೀಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ?

  • ಪ್ರಸಾರ ಭಾರತಿ prasarbharati.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ನೇಮಕಾತಿ ಅಧಿಸೂಚನೆಯನ್ನು ಓದಿ.
  • ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಸಲ್ಲಿಸಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ