AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank jobs 2025: ಬ್ಯಾಂಕಿನಲ್ಲಿ ಕೆಲಸ ಮಾಡಲು ಬಯಸುವವರಿಗೆ ಇಲ್ಲಿದೆ ಉತ್ತಮ ಅವಕಾಶ

ಪಂಜಾಬ್ & ಸಿಂಧ್ ಬ್ಯಾಂಕ್ 110 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಫೆಬ್ರವರಿ 7 ರಿಂದ 28 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 20-30 ವರ್ಷಗಳು. ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ - 850 ರೂ., ಎಸ್ಸಿ/ಎಸ್ಟಿ - 100 ರೂ. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸ್ಕ್ರೀನಿಂಗ್ ಪರೀಕ್ಷೆ, ಸಂದರ್ಶನ. ಹೆಚ್ಚಿನ ಮಾಹಿತಿಗಾಗಿ, ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ.

Bank jobs 2025: ಬ್ಯಾಂಕಿನಲ್ಲಿ ಕೆಲಸ ಮಾಡಲು ಬಯಸುವವರಿಗೆ ಇಲ್ಲಿದೆ  ಉತ್ತಮ ಅವಕಾಶ
Punjab And Sind Bank Recruitment 2025
ಅಕ್ಷತಾ ವರ್ಕಾಡಿ
|

Updated on: Feb 11, 2025 | 12:20 PM

Share

ಬ್ಯಾಂಕಿನಲ್ಲಿ ಕೆಲಸ ಮಾಡಲು ಬಯಸುವವರಿಗೆ, ಅದಕ್ಕಾಗಿ ತಯಾರಿ ನಡೆಸುತ್ತಿರುವವರಿಗೆ ಇಲ್ಲಿದೆ ಉತ್ತಮ ಅವಕಾಶ. ಪಂಜಾಬ್‌ & ಸಿಂಧ್ ಬ್ಯಾಂಕ್‌ನಲ್ಲಿ ಬಂಪರ್ ಹುದ್ದೆಗಳು ಖಾಲಿ ಇವೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ನೀವು ಕೂಡ ಕೆಲಸ ಪಡೆಯಲು ಬಯಸಿದರೆ ಪಂಜಾಬ್‌ & ಸಿಂಧ್ ಬ್ಯಾಂಕ್‌ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಪಂಜಾಬ್‌ & ಸಿಂಧ್ ಬ್ಯಾಂಕ್ 110 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 7 ರಿಂದ ಫೆಬ್ರವರಿ 28 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್‌ಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ punjabandsindbank.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ESIC ನಲ್ಲಿ ಉದ್ಯೋಗ ಪಡೆಯಲು ಸುವರ್ಣ ಅವಕಾಶ; 200ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ಅಧಿಸೂಚನೆಯ ಪ್ರಕಾರ, ಈ ನೇಮಕಾತಿ ಅಭಿಯಾನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 20 ರಿಂದ 30 ವರ್ಷಗಳ ನಡುವೆ ಇರಬೇಕು. ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 850 ರೂ., ಎಸ್‌ಸಿ ಮತ್ತು ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 100 ರೂ. ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯು ಲಿಖಿತ ಪರೀಕ್ಷೆ, ಸ್ಕ್ರೀನಿಂಗ್ ಪರೀಕ್ಷೆ, ಸಂದರ್ಶನ ಮತ್ತು ಮೆರಿಟ್ ಪಟ್ಟಿಯ ಆಧಾರದ ಮೇಲೆ ನಡೆಯಲಿದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ