DHFWS Recruitment 2026: ರಾಯಚೂರು DHFWSನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ಹುದ್ದೆಗಳಿಗೆ 10ನೇ, 12ನೇ ತರಗತಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತರು ಮಾರ್ಚ್ 11ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

DHFWS Recruitment 2026: ರಾಯಚೂರು DHFWSನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು
ಆರೋಗ್ಯ ಸಹಾಯಕಿ ಹುದ್ದೆ

Updated on: Mar 01, 2026 | 4:57 PM

ರಾಯಚೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಬೇಕೆಂದು ಬಯಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

  • ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು
  • ಹುದ್ದೆಗಳ ಸಂಖ್ಯೆ: 20
  • ಉದ್ಯೋಗ ಸ್ಥಳ: ರಾಯಚೂರು
  • ಹುದ್ದೆಯ ಹೆಸರು: ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಿ
  • ಮಾಸಿಕ ವೇತನ: 15,397 ರೂ.

ಶೈಕ್ಷಣಿಕ ಅರ್ಹತೆ:

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ, 12ನೇ ತರಗತಿ ಹಾಗೂ ಸಂಬಂಧಿತ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಗರಿಷ್ಠ ವಯಸ್ಸು 40 ವರ್ಷಗಳಾಗಿದ್ದು, ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಅರ್ಜಿಸಲ್ಲಿಸುವ ವಿಧಾನ:

ಮೊದಲಿಗೆ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ. ಶೈಕ್ಷಣಿಕ ಪ್ರಮಾಣಪತ್ರಗಳು, ಗುರುತಿನ ಚೀಟಿ, ವಯಸ್ಸಿನ ದೃಢೀಕರಣ ದಾಖಲೆಗಳು, ಅನುಭವ ಪ್ರಮಾಣಪತ್ರಗಳು ಹಾಗೂ ಇತ್ತೀಚಿನ ಫೋಟೋ ಸ್ಕ್ಯಾನ್ ಪ್ರತಿಗಳನ್ನು ಸಿದ್ಧವಾಗಿಡಿ.

ಅಧಿಕೃತ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ನಮೂನೆಯನ್ನು ತೆರೆದು, ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಕೊನೆಯಲ್ಲಿ ‘apply’ ಬಟನ್ ಒತ್ತಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಭವಿಷ್ಯ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆಯನ್ನು ಕ್ಯಾಪ್ಚರ್​ ಮಾಡಿ ಇಟ್ಟುಕೊಳ್ಳಿ. ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಮಹಿಳೆಯರಿಗೆ ಇದು ಒಳ್ಳೆಯ ಅವಕಾಶವಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:50 pm, Sun, 1 March 26

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us