Railway Recruitment 2022: SSLC ಪಾಸಾದವರಿಗೆ ರೈಲ್ವೇಯಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Jul 28, 2022 | 8:00 AM

Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Railway Recruitment 2022: SSLC ಪಾಸಾದವರಿಗೆ ರೈಲ್ವೇಯಲ್ಲಿದೆ ಉದ್ಯೋಗಾವಕಾಶ
Railway Recruitment 2022
Follow us on

Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ರೈಲ್ವೇ ನೇಮಕಾತಿ ಸೆಲ್ (RRC) ಉತ್ತರ ಮಧ್ಯ ರೈಲ್ವೆ (NCR) ನಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಈ ವಾರದೊಳಗೆ ಅರ್ಜಿ ಸಲ್ಲಿಸಬೇಕಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 1659
  • ಪ್ರಯಾಗರಾಜ್- 703 ಹುದ್ದೆಗಳು
  • ಝಾನ್ಸಿ- 660 ಹುದ್ದೆಗಳು
  • ಆಗ್ರಾ- 296 ಹುದ್ದೆಗಳು

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ SSC/ಮೆಟ್ರಿಕ್ಯುಲೇಷನ್/10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು.

ಇದನ್ನೂ ಓದಿ
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ಇದು ಅಪ್ರೆಂಟಿಸ್ ಹುದ್ದೆಗಳಾಗಿದ್ದು, ಹೀಗಾಗಿ ಹುದ್ದೆಗಳಿಗೆ 15 ರಿಂದ 24 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು 100 ರೂ. ಪಾವತಿಸಬೇಕಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 1, 2022

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.