Railway Recruitment 2022: ರೈಲ್ವೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 25 ಸಾವಿರ ರೂ.

| Updated By: ಝಾಹಿರ್ ಯೂಸುಫ್

Updated on: Jan 13, 2022 | 8:23 PM

Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Railway Recruitment 2022: ರೈಲ್ವೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 25 ಸಾವಿರ ರೂ.
Railway Recruitment 2022
Follow us on

Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಭಾರತೀಯ ರೈಲ್ವೇ ಈಶಾನ್ಯ ರೈಲ್ವೆ (NER) ಅಡಿಯಲ್ಲಿ ಗೇಟ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನಾಂಕವಾಗಿದ್ದು, ಅದಕ್ಕೂ ಮುನ್ನ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ಹೆಸರು ಮತ್ತು ಒಟ್ಟು ಹುದ್ದೆಗಳು:
ಗೇಟ್‌ಮ್ಯಾನ್ – 323 ಪೋಸ್ಟ್‌ಗಳು

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ 65 ವರ್ಷದೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಫೆಬ್ರವರಿ 2022

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳು ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Railway Recruitment 2022: Apply for 323 posts)