Railway Recruitment 2022: ಎಸ್ಎಸ್ಎಲ್ಸಿ ಪಾಸಾದವರಿಗೆ ಸುವರ್ಣಾವಕಾಶ: 5636 ಹುದ್ದೆಗಳಿಗೆ ನೇಮಕಾತಿ
Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nfr.indianrailways.gov.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
Northeast Frontier Railway (NFR/RRC) Recruitment 2022: ರೈಲ್ವೇ ನೇಮಕಾತಿ ಸೆಲ್, RRC ಉತ್ತರ ಫ್ರಾಂಟಿಯರ್ ರೈಲ್ವೆಯಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ವಿವಿಧ ಘಟಕಗಳ ಅನೇಕ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nfr.indianrailways.gov.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಖ್ಯೆ: ವಿವಿಧ ಟ್ರೇಡ್‌ಗಳಲ್ಲಿ ಒಟ್ಟು 5636 ಅಪ್ರೆಂಟಿಸ್‌ಗಳ ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ವಿದ್ಯಾರ್ಹತೆ: ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿದ್ದು, ಸಂಬಂಧಪಟ್ಟ ಟ್ರೇಡ್‌ನಲ್ಲಿ ಐಟಿಐ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ: 15 ರಿಂದ 24 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಯು ಮೆಟ್ರಿಕ್ಯುಲೇಷನ್ ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nfr.indianrailways.gov.in ಗೆ ಭೇಟಿ ನೀಡಬೇಕು. ಇದರ ನಂತರ, ‘ಸಾಮಾನ್ಯ ಮಾಹಿತಿ’ ವಿಭಾಗಕ್ಕೆ ಹೋದ ನಂತರ, ‘ರೈಲ್ವೇ ನೇಮಕಾತಿ ಸೆಲ್’ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಬಳಿಕ ಅಪ್ಲಿಕೇಶನ್ ಲಿಂಕ್‌ಗೆ ಹೋಗುವ ಮೂಲಕ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ. ಜೊತೆಗೆ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅರ್ಜಿಯನ್ನು ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು: ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಜೂನ್ 1, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 30, 2022
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.