Railway Recruitment 2022: ಎಸ್​ಎಸ್​ಎಲ್​ಸಿ ಪಾಸಾದವರಿಗೆ ಸುವರ್ಣಾವಕಾಶ: 5636 ಹುದ್ದೆಗಳಿಗೆ ನೇಮಕಾತಿ

| Updated By: ಝಾಹಿರ್ ಯೂಸುಫ್

Updated on: Jun 01, 2022 | 9:00 AM

Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nfr.indianrailways.gov.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Railway Recruitment 2022: ಎಸ್​ಎಸ್​ಎಲ್​ಸಿ ಪಾಸಾದವರಿಗೆ ಸುವರ್ಣಾವಕಾಶ: 5636 ಹುದ್ದೆಗಳಿಗೆ ನೇಮಕಾತಿ
Railway Recruitment 2022
Follow us on

Northeast Frontier Railway (NFR/RRC) Recruitment 2022: ರೈಲ್ವೇ ನೇಮಕಾತಿ ಸೆಲ್, RRC ಉತ್ತರ ಫ್ರಾಂಟಿಯರ್ ರೈಲ್ವೆಯಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ವಿವಿಧ ಘಟಕಗಳ ಅನೇಕ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nfr.indianrailways.gov.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಖ್ಯೆ:
ವಿವಿಧ ಟ್ರೇಡ್‌ಗಳಲ್ಲಿ ಒಟ್ಟು 5636 ಅಪ್ರೆಂಟಿಸ್‌ಗಳ ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿದ್ದು, ಸಂಬಂಧಪಟ್ಟ ಟ್ರೇಡ್‌ನಲ್ಲಿ ಐಟಿಐ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
15 ರಿಂದ 24 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಯು ಮೆಟ್ರಿಕ್ಯುಲೇಷನ್ ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nfr.indianrailways.gov.in ಗೆ ಭೇಟಿ ನೀಡಬೇಕು. ಇದರ ನಂತರ, ‘ಸಾಮಾನ್ಯ ಮಾಹಿತಿ’ ವಿಭಾಗಕ್ಕೆ ಹೋದ ನಂತರ, ‘ರೈಲ್ವೇ ನೇಮಕಾತಿ ಸೆಲ್’ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಬಳಿಕ ಅಪ್ಲಿಕೇಶನ್​ ಲಿಂಕ್‌ಗೆ ಹೋಗುವ ಮೂಲಕ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ. ಜೊತೆಗೆ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅರ್ಜಿಯನ್ನು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಜೂನ್ 1, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 30, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.