Railway Recruitment 2022: ಪಿಯುಸಿ ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ rrc-wr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುರ್ವಣಾವಕಾಶ. ಏಕೆಂದರೆ ರೈಲ್ವೇ ನೇಮಕಾತಿ ಸೆಲ್ (RRC), ಪಶ್ಚಿಮ ರೈಲ್ವೆ (WR) ಅಡಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿಗಾಗಿ ರೈಲ್ವೆ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ rrc-wr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 16
ಅರ್ಹತಾ ಮಾನದಂಡಗಳು:
- ಲೆವೆಲ್-4 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಡಿಗ್ರಿ ಪಾಸಾಗಿರಬೇಕು.
- ಲೆವೆಲ್-5, 3, 2 ಹುದ್ದೆಗಳಿಗೆ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 25 ವರ್ಷಗಳು.
ಅರ್ಜಿ ಶುಲ್ಕ:
- SC/ ST/ ಮಾಜಿ ಸೈನಿಕರು/ ಮಹಿಳೆಯರು, ಅಲ್ಪಸಂಖ್ಯಾತರು* ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ರೂ. ರೂ .250/-
- ಇತರೆ ವರ್ಗದ ಅಭ್ಯರ್ಥಿಗಳಿಗೆ- ರೂ.500/-
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 4, 2022.
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಇನ್ನು ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.