Railway Recruitment 2022: ಪಿಯುಸಿ ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Sep 10, 2022 | 5:23 PM

Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrc-wr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Railway Recruitment 2022: ಪಿಯುಸಿ ಪಾಸಾದವರಿಗೆ ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Railway Recruitment 2022
Follow us on

Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುರ್ವಣಾವಕಾಶ. ಏಕೆಂದರೆ ರೈಲ್ವೇ ನೇಮಕಾತಿ ಸೆಲ್ (RRC), ಪಶ್ಚಿಮ ರೈಲ್ವೆ (WR) ಅಡಿಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿಗಾಗಿ ರೈಲ್ವೆ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrc-wr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 16

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
  • ಲೆವೆಲ್-4 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಡಿಗ್ರಿ ಪಾಸಾಗಿರಬೇಕು.
  • ಲೆವೆಲ್-5, 3, 2 ಹುದ್ದೆಗಳಿಗೆ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 25 ವರ್ಷಗಳು.

ಅರ್ಜಿ ಶುಲ್ಕ:

  • SC/ ST/ ಮಾಜಿ ಸೈನಿಕರು/ ಮಹಿಳೆಯರು, ಅಲ್ಪಸಂಖ್ಯಾತರು* ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ರೂ. ರೂ .250/-
  • ಇತರೆ ವರ್ಗದ ಅಭ್ಯರ್ಥಿಗಳಿಗೆ- ರೂ.500/-

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 4, 2022.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಇನ್ನು ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.