Railway Recruitment 2022: SSLC ಪಾಸಾಗಿದ್ದೀರಾ? ಹಾಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Jul 04, 2022 | 8:00 AM

Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Railway Recruitment 2022: SSLC ಪಾಸಾಗಿದ್ದೀರಾ? ಹಾಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Railway Recruitment 2022
Follow us on

Railway Recruitment 2022: ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ರೈಲ್ವೆ ನೇಮಕಾತಿ ಸೆಲ್ (RRC) ಉತ್ತರ ಮಧ್ಯ ರೈಲ್ವೆಯ (NCR) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ – 1659

ಯಾವ ವಿಭಾಗಗಳಿಗೆ ನೇಮಕಾತಿ:

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
  • ಪ್ರಯಾಗರಾಜ್ – 703 ಹುದ್ದೆಗಳು
  • ಝಾನ್ಸಿ – 660 ಹುದ್ದೆಗಳು
  • ಆಗ್ರಾ – 296 ಹುದ್ದೆಗಳು

ಅರ್ಹತಾ ಮಾನದಂಡಗಳು:
ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ SSC/ಮೆಟ್ರಿಕ್ಯುಲೇಷನ್/10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು.

ವಯೋಮಿತಿ:
ಈ ಅಪ್ರೆಂಟಿಸ್ ಹುದ್ದೆಗಳಿಗೆ 15 ರಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 100 ರೂ. ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 01, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.