Railway Recruitment 2022: ಕ್ರೀಡಾ ಕೋಟಾದಲ್ಲಿ ರೈಲ್ವೇ ಇಲಾಖೆಯಲ್ಲಿ ಉದ್ಯೋಗಾವಕಾಶ
Railway Recruitment 2022: ಲೆವೆಲ್ 2 ಮತ್ತು ಲೆವೆಲ್ 3 ಹುದ್ದೆಗಳಿಗೆ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ.
ಭಾರತೀಯ ರೈಲ್ವೇ ಇಲಾಖೆಯ ಸೌತ್ ಈಸ್ಟರ್ನ್ ರೈಲ್ವೇ (ಆಗ್ನೇಯ ರೈಲ್ವೇ) ಯಲ್ಲಿ ಕ್ರೀಡಾ ಕೋಟಾದ ಅಡಿಯಲ್ಲಿ 2,3,4,5 ಹಂತದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 3ನೇ ಜನವರಿ 2022 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcser.co.in ಮೂಲಕ 2 ಫೆಬ್ರವರಿ 2022 ರವರೆಗೆ ಅರ್ಜಿ ಸಲ್ಲಿಸಬಹುದು. ಒಟ್ಟು 21 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
ವಿದ್ಯಾರ್ಹತೆ: ಲೆವೆಲ್ 4 ಮತ್ತು ಲೆವೆಲ್ 5 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಲೆವೆಲ್ 2 ಮತ್ತು ಲೆವೆಲ್ 3 ಹುದ್ದೆಗಳಿಗೆ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ.
ಅಲ್ಲದೆ, ಅಭ್ಯರ್ಥಿಯು ಆಯಾ ಕ್ರೀಡೆಯಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿರಬೇಕು. ಹೆಚ್ಚಿನ ಶೈಕ್ಷಣಿಕ ಅರ್ಹತೆ ಮತ್ತು ಈ ನೇಮಕಾತಿಗೆ ಸಂಬಂಧಿಸಿದ ಇತರ ಮಾಹಿತಿಗಾಗಿ, ಅಭ್ಯರ್ಥಿಗಳು ಬಿಡುಗಡೆಯಾದ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ವಯೋಮಿತಿ: ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 25 ವರ್ಷಗಳ ಒಳಗಿರಬೇಕು. ಅಭ್ಯರ್ಥಿಗಳ ವಯಸ್ಸನ್ನು ಜನವರಿ 1, 2022 ರ ಅನುಸಾರ ಲೆಕ್ಕಹಾಕಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಮತ್ತು ಒಬಿಸಿ ವರ್ಗಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಹಾಗೆಯೇ ಎಸ್‌ಸಿ ಮತ್ತು ಎಸ್‌ಟಿ ವರ್ಗದವರು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಟೆಸ್ಟ್, ದಾಖಲೆ ಪರಿಶೀಲನೆ, ಕ್ರೀಡಾ ಸಾಧನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಜನವರಿ 3, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 2, 2022 ಅಧಿಕೃತ ವೆಬ್‌ಸೈಟ್ – rrcser.co.in
ಈ ನೇಮಕಾತಿ ಕುರಿತಾದ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್..!
ಇದನ್ನೂ ಓದಿ: Ravindra Jadeja: ಸ್ಟಾರ್ ಆಲ್ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!
ಇದನ್ನೂ ಓದಿ: Rohit Sharma: ಫಿಟ್ನೆಸ್ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?
ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!