AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2023: ರೈಲ್ವೆ ನೇಮಕಾತಿ: ಮಾಸಿಕ ವೇತನ 56 ಸಾವಿರ ರೂ.

Railway Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 26, 2023 ರಂತೆ 15 ವರ್ಷ ಮತ್ತು 24 ವರ್ಷಗಳ ನಡುವೆ ಇರಬೇಕು.

Railway Recruitment 2023: ರೈಲ್ವೆ ನೇಮಕಾತಿ: ಮಾಸಿಕ ವೇತನ 56 ಸಾವಿರ ರೂ.
Railway Recruitment 2023
TV9 Web
| Edited By: |

Updated on: Jun 27, 2023 | 2:17 PM

Share

Railway Recruitment 2023: ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗದಲ್ಲಿನ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3,624 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಶ್ಚಿಮ ರೈಲ್ವೆಯ ಅಧಿಕೃತ ವೆಬ್​ಸೈಟ್ rrc-wr.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ: 3,624 ಹುದ್ದೆಗಳು
  • UR (ಜನರಲ್) ಅಭ್ಯರ್ಥಿಗಳಿಗೆ: 1,487 ಹುದ್ದೆಗಳು
  • SC ಅಭ್ಯರ್ಥಿಗಳಿಗೆ: 532 ಹುದ್ದೆಗಳು
  • ST ಅಭ್ಯರ್ಥಿಗಳಿಗೆ: 266 ಹುದ್ದೆಗಳು
  • OBC ಅಭ್ಯರ್ಥಿಗಳಿಗೆ: 981 ಹುದ್ದೆಗಳು
  • EWS ಅಭ್ಯರ್ಥಿಗಳಿಗೆ: 358 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು. ಇದಲ್ಲದೆ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 26, 2023 ರಂತೆ 15 ವರ್ಷ ಮತ್ತು 24 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ:

  • SC/ST/PWD/ಮಹಿಳಾ ಅರ್ಜಿದಾರರಿಗೆ: ಶುಲ್ಕವಿಲ್ಲ
  • ಇತರೆ ಎಲ್ಲಾ ಅರ್ಜಿದಾರರಿಗೆ: ರೂ. 100

ಆಯ್ಕೆ ಪ್ರಕ್ರಿಯೆ:

ಅಪ್ರೆಂಟಿಸ್ ಆಕ್ಟ್, 1961 ರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಅರ್ಜಿದಾರರ ಮೆಟ್ರಿಕ್ಯುಲೇಶನ್​ನಲ್ಲಿ ಶೇಕಡಾವಾರು ಅಂಕಗಳ ಸರಾಸರಿಯನ್ನು ತೆಗೆದುಕೊಳ್ಳುತ್ತದೆ. ಹಾಗೆಯೇ ಐಟಿಐ ಪ್ರಮಾಣಪತ್ರವನ್ನು ಕೂಡ ಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವಾಗಿ ರೂ. 18,000 ರಿಂದ ರೂ. 56,900 ರವರೆಗೆ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 26/07/2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ