Railway Recruitment 2023: ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗದಲ್ಲಿನ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3,624 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಶ್ಚಿಮ ರೈಲ್ವೆಯ ಅಧಿಕೃತ ವೆಬ್ಸೈಟ್ rrc-wr.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ನೇಮಕಾತಿ ವಿವರಗಳು:
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು. ಇದಲ್ಲದೆ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 26, 2023 ರಂತೆ 15 ವರ್ಷ ಮತ್ತು 24 ವರ್ಷಗಳ ನಡುವೆ ಇರಬೇಕು.
ಅರ್ಜಿ ಶುಲ್ಕ:
ಆಯ್ಕೆ ಪ್ರಕ್ರಿಯೆ:
ಅಪ್ರೆಂಟಿಸ್ ಆಕ್ಟ್, 1961 ರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಅರ್ಜಿದಾರರ ಮೆಟ್ರಿಕ್ಯುಲೇಶನ್ನಲ್ಲಿ ಶೇಕಡಾವಾರು ಅಂಕಗಳ ಸರಾಸರಿಯನ್ನು ತೆಗೆದುಕೊಳ್ಳುತ್ತದೆ. ಹಾಗೆಯೇ ಐಟಿಐ ಪ್ರಮಾಣಪತ್ರವನ್ನು ಕೂಡ ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವಾಗಿ ರೂ. 18,000 ರಿಂದ ರೂ. 56,900 ರವರೆಗೆ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 26/07/2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.